ರಾಜ್ಯ

ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ಡೆಕ್ಕನ್ ವಿಮಾನ ಯಾನ ಸೇವೆಗೆ ಪ್ರಸ್ತಾವನೆ: ಯೋಗೇಶ್ವರ್

Shilpa D

ಬೆಂಗಳೂರು: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡೆಕ್ಕನ್ ವಿಮಾನಯಾನ ಸಂಸ್ಥೆ ಚಿಕ್ಕ ವಿಮಾನಗಳ ಹಾಗೂ ಹೆಲಿಕಾಪ್ಟರ್ ಗಳ ವಾಯುಯಾನ ಸೇವೆಯನ್ನು ಒದಗಿಸಲು ಮುಂದೆ ಬಂದಿವೆ. ಈ ಸಂಬಂಧ ಒಂದು ಪ್ರಾತ್ಯಕ್ಷಿಕೆಯನ್ನು ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ವೀಕ್ಷಿಸಿದರು.

ಕಲಬುರಗಿ, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಖಾಸಗಿ- ಸರ್ಕಾರಿ ಸಹಭಾಗಿತ್ವದಲ್ಲಿ ಆರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.

ಅಪೋಲೋ ಆಸ್ಪತ್ರೆ ಸಮೂಹ ಹಾಗೂ ಟ್ರೇಡ್ ಇಂಡಿಯಾ ಪ್ರೈ.ಲಿ. ಸಂಸ್ಥೆಯವರು ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು. ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಕರ್ನಾಟಕದಲ್ಲಿ 3000 ಕಿ.ಮೀ. ವಾಯು ಯಾನ ಸೇವೆಯನ್ನು ಡೆಕ್ಕನ್ ಸಂಸ್ಥೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಪ್ರವಾಸಿ ಸ್ಥಳಗಳಿಗೆ ಡೆಕ್ಕನ್ ಸಂಸ್ಥೆ ತನ್ನ ಸೇವೆಯನ್ನು ವಿಸ್ತರಿಸಲಿವೆ. ಅಲ್ಲದೆ ಪ್ರವಾಸಿ ಸ್ಥಳಗಳನ್ನು ಸಹ ಅಭಿವೃದ್ಧಿಪಡಿಸಲು ಉತ್ಸುಕವಾಗಿರುವುದಾಗಿ ಟ್ರೇಡ್ ಇಂಡಿಯಾ ಪ್ರೈ.ಲಿ ನಿರ್ದೇಶಕ ಅನಿಲ್ ಕಾಮಿನೇನಿ ಇದೇ ವೇಳೆ ತಿಳಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ ಸಚಿವ ಯೋಗೇಶ್ವರ್, ಡೆಕ್ಕನ್ ಸಂಸ್ಥೆಯವರಿಗೆ ಅವಶ್ಯಕತೆಯಿರುವ ಜಮೀನನ್ನು ಗುತ್ತಿಗೆಗೆ ನೀಡುವ ಸಂಬಂಧ ಹಾಗೂ ವಾಯುಯಾನಕ್ಕೆ ಅಗತ್ಯವಿರುವ ಅನುಮತಿಯನ್ನು ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಆರ್‌ಎಸ್ ಹಿನ್ನೀರಿನಲ್ಲಿ ಜಲ ಕ್ರೀಡೆಗಳನ್ನು ಪ್ರಾರಂಭಿಸುವುದರ ಜೊತೆಗೆ, ಪಾರಂಪರಿಕ ವೇಣುಗೋಪಾಲ ದೇವಾಲಯವನ್ನು 1,450 ಕೋಟಿ ರೂ.ಗಳ ವೆಚ್ಚದಲ್ಲಿ ಪುನರ್ ಸ್ಥಾಪಿಸುವುದಾಗಿ ಯೋಗೇಶ್ವರ್ ತಿಳಿಸಿದರು.

SCROLL FOR NEXT