ಇಂದ್ರಜಿತ್ ಲಂಕೇಶ್ 
ರಾಜ್ಯ

ದಲಿತರನ್ನು ಎತ್ತಿ ಕಟ್ಟಲು ಯತ್ನಿಸಿದ ಇಂದ್ರಜಿತ್‌ ವಿರುದ್ಧ ಕ್ರಮ ಕೈಗೊಳ್ಳಿ; ಗೃಹ ಸಚಿವರಿಗೆ ಟಿಜೆ ಅಬ್ರಾಹಂ ದೂರು

ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮಂಗಳವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. 

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮಂಗಳವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. 

ವಿಧಾನಸೌಧದಲ್ಲಿ ಗೃಹಸಚಿವರನ್ನು ಭೇಟಿ ಮಾಡಿ ಇಂದ್ರಜಿತ್‌ ಲಂಕೇಶ್‌ ವಿರುದ್ಧ ದೂರು ನೀಡಿದ ಬಳಿಕ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ದಲಿತ ಅನ್ನೋ ಪದವನ್ನು ಪದೇ ಪದೇ ಬಳಸಿದ್ದಾರೆ. ಜಾತಿಗಳ ಬಗ್ಗೆ ಉಲ್ಲೇಖಿಸಿ ಶತ್ರುತ್ವ ಬೆಳೆಯುವಂತಹ ಹೇಳಿಕೆ ನೀಡಿರುವ ಇಂದ್ರಜಿತ್ ಲಂಕೇಶ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ದೂರಿನಲ್ಲಿ ಕೋರಿದ್ದಾರೆ.

ದಲಿತರಿಗೆ ಬೇರೆ ಸಮುದಾಯದ ಬಗ್ಗೆ ಕೋಪ ಬರುವಂತೆ ಇಂದ್ರಜಿತ್‌ ಲಂಕೇಶ್‌ ಮಾತನಾಡಿದ್ದಾರೆ. ದಲಿತರನ್ನು ಎತ್ತಿ ಕಟ್ಟಲು ಇಂದ್ರಜಿತ್‌ ಪ್ರಯತ್ನಪಟ್ಟಿದ್ದಾರೆ. ಇಂದ್ರಜಿತ್‌ ಲಂಕೇಶ್‌ ಹೇಳಿಕೆಯಿಂದ ಮೈಸೂರು ಪೋಲಿಸರ ಮಾನ - ಮರ್ಯಾದೆ ಹೋಗಿದೆ ಎಂದು ಆರೋಪಿಸಿದ್ದಾರೆ.

ಇಂದ್ರಜಿತ್ ವಿರುದ್ಧ ಮೈಸೂರು ಪೊಲೀಸರು ಮಾನನಷ್ಟ ಮೊಕದ್ದಮೆ ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಹೇಳಿದ್ದಾರೆ. ದಲಿತ ಸಪ್ಲೈಯರ್ ಮೇಲೆ ಹಲ್ಲೆ ಆಗಿದೆ ಎಂದು ಒತ್ತಿ ಹೇಳ್ತಾರೆ. ಪೊಲೀಸರು ಕಾಂಪ್ರಮೈಜ್‌ ಆಗಿದ್ದಾರೆ. ಮೈಸೂರಿನ ಪೊಲೀಸ್‌ ಸ್ಟೇಷನ್‌ಗಳು ಸೆಟಲ್‌ಮೆಂಟ್ ಸ್ಟೇಷನ್ ಎಂದು ಹೇಳಿದ್ದಾರೆ. ಇದರ ವಿರುದ್ಧ ತನಿಖೆ ನಡೆಸಿ ಎಂದು ದೂರು ನೀಡಿದ್ದೇನೆ ಎಂದು ಟಿಜೆ ಅಬ್ರಹಾಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ