ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್: ಶೇ.11ರಷ್ಟು ತುಟ್ಟಿ ಭತ್ಯೆ ಏರಿಕೆ!

Manjula VN

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಅನಿರೀಕ್ಷಿತವಾಗಿ ಆಷಾಢ ಮಾಸದಲ್ಲಿ ಉಡುಗೊರೆ ಸಿಕ್ಕಿದೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಮಂಗಳವಾರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿ ಸೂಚನೆ ಹೊರಡಿಸಿದೆ.

ಜುಲೈ 1,2021 ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡುವಂತೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ. ಅಧಿಕೃತ ಆದೇಶ ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಅಖಿಲ ಭಾರತ ಬೆಲೆ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರ ನೌಕರರಿಗೆ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಏರಿಕೆ ದರ ನಿರ್ಧರಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ದರ ಶೇ.11.25% ಇದ್ದು, ಶೇ.11 ಹೆಚ್ಚಳದಿಂದಾಗಿ ಒಟ್ಟು 22.25ರಷ್ಟು ತುಟ್ಟಿಭತ್ಯೆ ಸಿಗಲಿದೆ. ಇದರಿಂದ 1.50 ಲಕ್ಷ ಪಿಂಚಣಿದಾರರು ಸೇರಿದಂತೆ ಒಟ್ಟಾರೆ 6 ಲಕ್ಷ ನೌಕರರಿಗೆ ಅನುಕೂಲವಾಗಲಿದೆ

SCROLL FOR NEXT