ಸಂಗ್ರಹ ಚಿತ್ರ 
ರಾಜ್ಯ

ಹಂತ ಹಂತವಾಗಿ ರಾಜ್ಯದಲ್ಲಿ ಭೌತಿಕ ತರಗತಿಗಳ ಆರಂಭ, ಮುಂದಿನ ವಾರ ಅಂತಿಮ ನಿರ್ಧಾರ: ಸಚಿವ ಸುರೇಶ್ ಕುಮಾರ್

ಆಫ್'ಲೈನ್ ತರಗತಿಗಳ ಆರಂಭಿಸುವಂತೆ ಆಗ್ರಹಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಕಾರ್ಯಪಡೆ ವರದಿ ಬಂದ ಕೂಡಲೇ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ. 

ಬೆಂಗಳೂರು: ಆಫ್'ಲೈನ್ ತರಗತಿಗಳ ಆರಂಭಿಸುವಂತೆ ಆಗ್ರಹಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಕಾರ್ಯಪಡೆ ವರದಿ ಬಂದ ಕೂಡಲೇ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲೆ, ಪಿಯು ಕಾಲೇಜುಗಳನ್ನು ಯಾವಾಗಿನಿಂದ ಆರಂಭಿಸಬೇಕೆಂಬ ಬಗ್ಗೆ ಅನ್ಬುಕುಮಾರ್ ನೇತೃತ್ವದ ಕಾರ್ಯಪಡೆ ಸೋಮವಾರ ಇಲ್ಲವೆ ಮಂಗಳವಾರ ಸರ್ಕಾರಕ್ಕೆ ವರದಿ ನೀಡಲಿದೆ. ವರದಿ ಕೈ ಸೇರಿದ ಕೂಡಲೇ ಪರಿಶೀಲಿಸಿ ಆರೋಗ್ಯ ಇಲಾಖೆಯ ಅಭಿಪ್ರಾಯವನ್ನೂ ಪಡೆದು ಶಾಲಾರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 

ಮೊದಲ ಹಂತದಲ್ಲಿ 9,10ನೇ ತರಗತಿ ಮತ್ತು ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸಲು ಚರ್ಚೆ ನಡೆಯುತ್ತಿದೆ. ಆದಷ್ಟು ಬೇಗ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!