ಸಂಗ್ರಹ ಚಿತ್ರ 
ರಾಜ್ಯ

ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬದಿಂದ 'ಭಾಗ್ಯಲಕ್ಷ್ಮಿ' ಯೋಜನೆ ಸೌಲಭ್ಯ ಹಿಂಪಡೆಯಲು ಸರ್ಕಾರ ಮುಂದು!

ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಗೆ ನೀಡಿದ್ದ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

ಕೊಪ್ಪಳ:  ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಗೆ ನೀಡಿದ್ದ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಮೂರು ಮತ್ತು ಅದಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದು, ಸದ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ. ಬಿಪಿಎಲ್ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗುವಿಗೆ 18 ವರ್ಷ ತುಂಬಿದ ನಂತರ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 1 ಲಕ್ಷ ರು ಹಣ ನೀಡಲಾಗುತ್ತದೆ. 2005-06ನೇ ಸಾಲಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿತ್ತು.

ಆದರೆ, ಪ್ರಸ್ತುತ ಮೂರು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಂದ 2006 ಮತ್ತು 2014 ರ ನಡುವೆ ನೀಡಲಾದ ಭಾಗ್ಯಲಕ್ಷ್ಮಿ ಬಾಂಡ್‌ಗಳನ್ನು ಹಿಂಪಡೆಯಲು ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆ-ಮನೆ ಸಮೀಕ್ಷೆಯನ್ನು ಪ್ರಾರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

2005-06ರಲ್ಲಿ ಹೊರಡಿಸಲಾದ ಭಾಗ್ಯಲಕ್ಷ್ಮಿ ಬಾಂಡ್‌ಗಳು 2023-24ರಲ್ಲಿ ಮೆಚ್ಯುರಿಟಿ ಹೊಂದಲಿವೆ, ಆದರೆ ಅನೇಕ ಫಲಾನುಭವಿ ಬಿಪಿಎಲ್ ಕುಟುಂಬಗಳು ಈಗ ಮೂರು ಮಕ್ಕಳನ್ನು ಹೊಂದಿವೆ.

ಬಾಂಡ್‌ಗಳನ್ನು ವಾಪಸ್ ತೆಗೆದುಕೊಳ್ಳಲು ತೆರಳುವ ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳಿಂದ ಪ್ರತಿರೋಧವನ್ನು ಎದುರಿಸುತ್ತಿದೆ, ವಿಶೇಷವಾಗಿ ಕೊಪ್ಪಳ ಜಿಲ್ಲೆಯ ಕುಕನೂರ್ ತಾಲ್ಲೂಕಿನಲ್ಲಿ ತೀವ್ರ ವಿರೋಧ ಎದುರಾಗಿದೆ.  ಇಂತಹ 50,000 ಕ್ಕೂ ಹೆಚ್ಚು ಕುಟುಂಬಗಳು ರಾಜ್ಯಾದ್ಯಂತ ಇವೆ, ಆದರೆ ಕೇವಲ ಕೊಪ್ಪಳ ಜಿಲ್ಲೆಯನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂರು ಅಥವಾ ಹೆಚ್ಚಿನ ಮಕ್ಕಳೊಂದಿಗೆ ಬಿಪಿಎಲ್ ಕುಟುಂಬಗಳಿಗೆ ನೀಡಲಾದ ಬಾಂಡ್‌ಗಳನ್ನು ಹಿಂಪಡೆಯುವ ಕ್ರಮವನ್ನು ಸರ್ಕಾರ ಪ್ರಾರಂಭಿಸಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾಗ್ಯಲಕ್ಷ್ಮಿ ಬಾಂಡ್‌ಗಳನ್ನು ನೀಡಿದಾಗ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಬಾರದು ಎಂದು ಬಿಪಿಎಲ್ ಕುಟುಂಬಗಳಿಗೆ ಮಾಹಿತಿ ನೀಡಲಾಗಿತ್ತು ಎಂದು ಇಲಾಖೆಯ ಉಪನಿರ್ದೇಶಕ ಅಕ್ಕಮಹಾದೇವಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು. 

ಬಡತನ ರೇಖೆಗಿಂತ ಕೆಳಗಿರುವ ಕುಟುಂಬವು ಇಬ್ಬರು ಮಕ್ಕಳನ್ನು ಹೊಂದಿದರೆ ಮಾತ್ರ ಯೋಜನೆಯ ಪ್ರಯೋಜನವನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಏತನ್ಮಧ್ಯೆ ಸರ್ಕಾರ ತನ್ನ ಈ ಆದೇಶವನ್ನು ಹಿಂಪಡೆಯಬೇಕು ಎಂದು ಬಿಪಿಎಲ್ ಕುಟುಂಬಗಳು ಒತ್ತಾಯಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT