ರಾಜ್ಯ

ಬೆಂಗಳೂರು: ಸೈಲೆಂಟ್ ಸುನೀಲ್ ಸೇರಿ 58 ರೌಡಿ ಶೀಟರ್ ಮನೆಗಳ ಮೇಲೆ ಸಿಸಿಬಿ ದಾಳಿ!

Manjula VN

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಕಾಳಗವನ್ನು ಹತ್ತಿಕ್ಕಲು ಮುಂದಾಗಿರುವ ಸಿಸಿಬಿ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ರೌಡಿ ಸೈಲೆಂಟ್ ಸುನೀಲ್ ಸೇರಿದಂತೆ 58 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. 

ದಾಳಿ ವೇಳೆ 28 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ. 

ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಹಾಗೂ ಹಲವು ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಾರಕಾಸ್ತ್ರ ಹಾಗೂ ಗಾಂಜಾ ಜಪ್ತಿ ಮಾಡಿದ್ದರು. 

ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನೀಲ್, ಜೆಸಿಪಿ ನಾರಾಯಣ್ ಹಾಗೂ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದರು. ಅವರಲ್ಲಿ ಕೆಲವರು ನ್ಯಾಯಾಂಗ ಬಂಧನದಲ್ಲಿದ್ದು, ಜೈಲಿನಿಂದಲೇ ಸಂಚು ರೂಪಿಸಿ ಸಹಚರರ ಮೂಲಕ ಅಪರಾಧ ಕೃತ್ಯ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರು ಪ್ರಮುಖ ರೌಡಿಗಳು ಹಾಗೂ ಅವರ ಸಹಚರರ ಪಟ್ಟಿ ಮಾಡಲಾಗಿತ್ತು. 

ಅದರನ್ವಯ 58 ರೌಡಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಲಾಸಿಪಾಳ್ಯ ರೌಟಿ ಪಟ್ಟಿಯಲ್ಲಿ ಹೆಸರಿದ್ದ ನಾಗ್'ನ ಮನೆಯಲ್ಲಿ ರೂ.2ಲಕ್ಷ ನಗದು ಹಾಗೂ ಡ್ರ್ಯಾಗರ್ ಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಇನ್ನು ಸೈಕಲ್ ರವಿ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ದಾಖಳೆಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. 

ಇನ್ನು ವಿಲ್ಸನ್ ಗಾರ್ಡನ್ ಠಾಣೆ ರೌಡಿಶೀಟರ್ ಶಾನುವಾಸ್ ಮನೆ, ಕಚೇರಿಯಲ್ಲಿ ಏನೂ ಸಿಕ್ಕಿಲ್ಲ. ಆದರೆ ಆತನ ಕಚೇರಿಯಲ್ಲಿ 254 ಆಧಾರ್ ಕಾರ್ಡ್'ಗಳು ಮಾರಕಾಸ್ತ್ರಗಳು ಸಿಕ್ಕಿವೆ ಎಂದು ತಿಳಿದುಬಂದಿದೆ.

SCROLL FOR NEXT