ಪ್ರವಾಹ ಪರಿಸ್ಥಿತಿ ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಅತಿವೃಷ್ಟಿ: ಪ್ರವಾಹ ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ 

ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು.

ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ ನಡೆದ ಅತಿವೃಷ್ಟಿ/ಪ್ರವಾಹ ಕುರಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ವಾರದಿಂದ ದಾಖಲೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರದ ಜತೆ ನಿರಂತರ ಸಂಪರ್ಕದಲ್ಲಿದ್ದು, ಪ್ರವಾಹ ನಿರ್ವಹಣೆ ಕುರಿತು ನಿಗಾ ವಹಿಸಲಾಗಿದೆ. 2-3 ದಿನಗಳಲ್ಲಿ ಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಪರಿಸ್ಥಿತಿ ನಿರ್ವಹಣೆಗೆ ಸರಕಾರದಿಂದ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ಮನೆಹಾನಿಯ ಬಾಕಿ ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ 113 ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿರುವುದರಿಂದ ಜನರ ತುರ್ತು ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗಾಗಿ 89 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಜನರ ಕಷ್ಟಗಳನ್ನು ಅರಿತುಕೊಂಡು ಜಿಲ್ಲಾಡಳಿತ ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಪರಿಹಾರ ಕಾರ್ಯದಲ್ಲಿ ತೊಡಕು ಉಂಟಾದರೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ, ಪ್ರವಾಹ ಸಂದರ್ಭದಲ್ಲಿ ತುರ್ತು ಔಷಧಿ ಮತ್ತಿತರ ಸಾಮಗ್ರಿಗಳನ್ನು ಎನ್.ಡಿ.ಆರ್.ಎಫ್. ಅನುದಾನದಲ್ಲಿ ಖರೀದಿಸಬೇಕು ಎಂದು ಸೂಚನೆ ನೀಡಿದರು. ಎನ್.ಡಿ.ಆರ್.ಎಫ್. ಹೊರತುಪಡಿಸಿ ಉಳಿದ ಹೆಚ್ಚಿನ ಅನುದಾನ ಅಗತ್ಯವಿದೆ ಎಂಬುದರ ಬಗ್ಗೆ ಪ್ರಸ್ತಾವ ಸಲ್ಲಿಸಬೇಕು. ಎನ್.ಡಿ.ಆರ್.ಎಫ್. ಅನುದಾನ ಹೆಚ್ಚಿಸುವಂತೆ ಕೋರಿ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT