ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿರುವುದು 
ರಾಜ್ಯ

ರಾಜ್ಯದಲ್ಲಿ ಇನ್ನೂ 5 ದಿನ ಮಳೆ: ಹವಾಮಾನ ಇಲಾಖೆ ಮಾಹಿತಿ

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮತ್ತು ನಾಳೆ (ಜು.25 ಮತ್ತು 26)ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ. ಮುಂದಿನ 4-5 ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಮಳೆರಾಯ ಕೊಂಚ ವಿರಾಮ ಕೊಡಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್​ ಹೇಳಿದ್ದಾರೆ.

ಮುಂದಿನ 24 ಗಂಟೆ ಅರಬ್ಬೀ ಸಮುದ್ರದಲ್ಲಿ 3.7 ಮೀಟರ್ ಎತ್ತರದ ಅಲೆಗಳು ದಡಕ್ಕೆ ಅಪ್ಪಲಿಸಲಿವೆ. ಗಾಳಿ ತೀವ್ರತೆ ಕೂಡ ಹೆಚ್ಚಾಗಿರಲಿದ್ದು, ಗಂಟೆಗೆ 40-520 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ, ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾದಾಗಿನಿಂದ 501.6 ಮಿ.ಮೀ ಮಳೆ ಸುರಿದಿದೆ ಎಂದು ತಿಳಿದುಬಂದಿದೆ. 

ಪ್ರತೀ ವರ್ಷ ಸಾಮಾನ್ಯವಾಗಿ 403.8 ಮಿ.ಮೀ ಮಳೆಯಾಗುತ್ತಿತ್ತು. ಈ ಬಾರಿ ಹೆಚ್ಚುವರಿ ಶೇ.24ರಷ್ಟು ಮಳೆಯಾಗಿದೆ. ಬೆಂಗಳೂರಿನಲ್ಲಿ ಶನಿವಾರ ರಾತ್ರಿ 8.30ರವರೆಗೆ 24.4 ಮಿ.ಮೀ. ಮಳೆ ದಾಖಲಾಗಿದೆ. ಹೆಚ್​ಎಎಲ್​ ಏರ್​ಪೋರ್ಟ್​​ ಒಂದರಲ್ಲೇ 16.6 ಮಿ.ಮೀ ಮಳೆ ಸುರಿದಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!