ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ ಕೊರೋನಾಗೆ 31 ಬಲಿ: ಇಂದು 1,606 ಪ್ರಕರಣ ಪತ್ತೆ; 5 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,606 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,96,163ಕ್ಕೆ ಏರಿಕೆಯಾಗಿದೆ.

ಕೋವಿಡ್-19 ಟೆಸ್ಟಿಂಗ್ (ಸಂಗ್ರಹ ಚಿತ್ರ)
Vishwanath S
Updated On : 26 Jul 2021, 7:32 pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,606 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,96,163ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 31 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,405ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 467 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,25,227ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.

Advertisement

Advertisement

ರಾಜ್ಯದಲ್ಲಿ ಇಂದು 1,937 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,36,678ಕ್ಕೆ ಏರಿಕೆಯಾಗಿದೆ. ಇನ್ನು 23,057 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,14,072 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,606 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.40ಕ್ಕೆ ಇಳಿದಿದೆ.

ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 69, ಚಿಕ್ಕಮಗಳೂರು 38, ದಕ್ಷಿಣ ಕನ್ನಡ 357, ಹಾಸನ 57, ಮೈಸೂರು 162, ಶಿವಮೊಗ್ಗ 52, ತುಮಕೂರು 59, ಉಡುಪಿ 78 ಪ್ರಕರಣಗಳು ವರದಿಯಾಗಿದೆ.

ಇನ್ನು ರಾಜ್ಯದ ಬಾಗಲಕೋಟೆ, ಬಳ್ಳಾರಿ, ಬೀದರ್, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement