ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಿದ ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಬುಧವಾರ ಪದಗ್ರಹಣ 

ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. 

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. 

ಶಾಸಕಾಂಗ ಸಭೆಯ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದನ್ನು ಬಿಜೆಪಿ ನಾಯಕರು ಘೋಷಿಸಿದ್ದಾರೆ. 

ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಎಸ್ಆರ್ ಬೊಮ್ಮಾಯಿ-ಗಂಗಮ್ಮ ಅವರ ಪುತ್ರ. 1960 ರ ಜ.28 ರಂದು ಜನಿಸಿದ ಬೊಮ್ಮಾಯಿ ಬಿ.ವಿ ಬೊಮ್ಮರೆಡ್ಡಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಿಂದ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದ ಬೊಮ್ಮಾಯಿ ಮೂಲತಃ ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ.

ನೀರಾವರಿ ಯೋಜನೆಗಳಲ್ಲಿ ಹಾಗೂ ನೀರಾವರಿ ವಿಷಯಗಳಲ್ಲಿ ಆಳವಾದ ಜ್ಞಾನ ಹೊಂದಿರುವ ಅವರು, ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದಲ್ಲೇ ಮೊದಲ ಶೇ.100 ರಷ್ಟು ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೆ ತರುವುದು ಸೇರಿದಂತೆ ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 

ಯಡಿಯೂರಪ್ಪ ಅವರ ಸಂಪುಟದಲ್ಲಿ ಮುಖ್ಯಮಂತ್ರಿಗಳ ಬಳಿಕ ಎರಡನೇ ಪ್ರಬಲ ಖಾತೆಯಾದ ಗೃಹ ಖಾತೆಯನ್ನೂ ನಿರ್ವಹಿಸಿ ಅನುಭವ ಹೊಂದಿರುವ ಬೊಮ್ಮಾಯಿ ಅವರು ತಮ್ಮ ರಾಜಕೀಯವನ್ನು ಪ್ರಾರಂಭಿಸಿದ್ದು ಜನತಾದಳದಿಂದ. 

1998 ಹಾಗೂ 2004 ರಲ್ಲಿ ಧಾರವಾಡ ಸ್ಥಳೀಯ ಅಧಿಕಾರಿಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು. 2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. 2008 ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವ ಕ್ಷೇತ್ರದಿಂದಬಿಜೆಪಿ  ಶಾಸಕರಾಗಿ ಬೊಮ್ಮಾಯಿ ಆಯ್ಕೆಗೊಂಡಿದ್ದರು. ಬೊಮ್ಮಾಯಿ ಅವರು ಈ ಕ್ಷೇತ್ರದಿಂದ ಈವರೆಗೂ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ವಿರೋಧಪಕ್ಷದ ಉಪನಾಯಕ, ಜೆಹೆಚ್ ಪಟೇಲ್ ಸಿಎಂ ಆಗಿದ್ದ ಅವಧಿಯಲ್ಲಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ಸಚಿವರಾಗಿ, ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವವನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ. ಜನತಾದಳದಿಂದ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್ ಆರ್ ಬೊಮ್ಮಾಯಿ) ಅವರು ಮುಖ್ಯಮಂತ್ರಿಯಾಗಿದ್ದ (1988-89) 32-33 ವರ್ಷಗಳ ನಂತರ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.  ಜು.28 ರಂದು ಮಧ್ಯಾಹ್ನ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

"ನನ್ನ ಸಿಎಂ ಆಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ ನಡ್ಡಾ, ಯಡಿಯೂರಪ್ಪ ಅವರಿಗೆ ಧನ್ಯವಾದ, ಸರ್ವಾನುಮತದಿಂದ ನನ್ನನ್ನು ಆಯ್ಕೆ ಮಾಡಿದ್ದಾರೆ. ಯಡಿಯೂರಪ್ಪ ನನಗೆ ಆಶೀರ್ವಾದ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತೇನೆ. ಎಲ್ಲರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತೇನೆ ಹಣಕಾಸು ಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇನೆ. ನನ್ನ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಯಡಿಯೂರಪ್ಪ ಅವರ ನಿರೀಕ್ಷೆ ಈಡೇರಿಸುವೆ"
-ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ

"ರಾಜ್ಯದ್ಲಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಉದ್ದೇಶ. ಬೊಮ್ಮಾಯಿ ಸಚಿವರಾಗಿ ಕೆಲಸ ಮಾಡಿದ್ದಾರೆ, ಅವರು ಸಿಎಂ ಆಗುತ್ತಿರುವುದು ನಮ್ಮ ಸೌಭಾಗ್ಯ"
-ನಿರ್ಗಮಿತ ಸಿಎಂ ಬಿಎಸ್ ಯಡಿಯೂರಪ್ಪ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT