ರಾಜ್ಯ

ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ: ಅಭಿಮಾನಿ ಆತ್ಮಹತ್ಯೆಗೆ ಯಡಿಯೂರಪ್ಪ ಬೇಸರ!

Manjula VN

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಹೇಳಿದ್ದಾರೆ. 

ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.ರಾಜಕಾರಣದಲ್ಲಿ ಏರಿಳಿತಗಳು ಸಹಜ. ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು ಎಂದು ತಿಳಿಸಿದ್ದಾರೆ. 

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮ ನಿವಾಸಿ ರವಿ ಎಂಬುವವರು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. 

SCROLL FOR NEXT