ರಾಜ್ಯ

ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಗೆ ಶಸ್ತ್ರಚಿಕಿತ್ಸೆ: ಆರೋಗ್ಯ ಸ್ಥಿರ

Manjula VN

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಯೆನೆಪೊಯ ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಡಯಾಲಿಸಿಸ್‌ ಗೂ ಒಳಗಾದರು. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವೈದ್ಯರು ಮಂಗಳವಾರ ಹೇಳಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಅವರ ಮೆದುಳಿನಲ್ಲಿನ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆದುಹಾಕಲಾಗಿದೆ ಮತ್ತು ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ಅವರ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಆಶಿಸಿದ್ದಾರೆ ಎಂದು ಹೇಳಲಾಗಿದೆ.

ಸೋಮವಾರ ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕರಾದ ಫಾ. ಮ್ಯಾಥ್ಯೂ ವಾಸ್ ಮತ್ತು ಬಾಂಡೆಲ್ ಚರ್ಚ್ ಪ್ರೀಸ್ಟ್ ಫ್ರಾ. ಮತ್ತು ಇತರ ಕುಟುಂಬ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಸ್ಕರ್ ಫರ್ನಾಂಡಿಸ್ ತಮ್ಮ ಮನೆಯಲ್ಲಿ ಯೋಗ ಮಾಡುವಾಗ ಕೆಳಗೆ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಸ್ಥಿತಿಯ ಬಗ್ಗೆ ವೈದ್ಯರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

SCROLL FOR NEXT