ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾಗೆ 19 ಬಲಿ: ಇಂದು 1,531 ಪ್ರಕರಣ ಪತ್ತೆ; 3 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,531 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,99,195ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,531 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,99,195ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 19 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,456ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 376 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,25,957ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,430 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,40,147ಕ್ಕೆ ಏರಿಕೆಯಾಗಿದೆ. ಇನ್ನು 22,569 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,48,319 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,531 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.03ಕ್ಕೆ ಇಳಿದಿದೆ.

ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 24, ಚಿಕ್ಕಮಗಳೂರು 51, ದಕ್ಷಿಣ ಕನ್ನಡ 337, ಹಾಸನ 97, ಮೈಸೂರು 93, ಶಿವಮೊಗ್ಗ 86, ತುಮಕೂರು 39, ಉಡುಪಿ 109 ಪ್ರಕರಣಗಳು ವರದಿಯಾಗಿದೆ.

ಇನ್ನು ರಾಜ್ಯದ ಗದಗ, ಕೊಪ್ಪಳ ಮತ್ತು ರಾಮನಗರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್