ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: ತಪಾಸಣೆ, ಸಂಪರ್ಕ ಪತ್ತೆ ಹೆಚ್ಚಿಸಲು ಗೌರವ್ ಗುಪ್ತ ಸೂಚನೆ
ನಗರದಲ್ಲಿ ಕೋವಿಡ್ ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ತಪಾಸಣೆ ಹಾಗೂ ಸಂಪರ್ಕ ಪತ್ತೆ ಕಾರ್ಯ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದರು.
ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ತಪಾಸಣೆ ಹಾಗೂ ಸಂಪರ್ಕ ಪತ್ತೆ ಕಾರ್ಯ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಯಲು ಎಲ್ಲಾ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಈ ಪೈಕಿ ಹೆಚ್ಚು ಕೋವಿಡ್ ಸೋಂಕು ಕಂಡುಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕೋವಿಡ್ ನಿಯಂತ್ರಿಸಬೇಕು ಎಂದರು.
ಕೋವಿಡ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವ ಕಡೆ ದಂಡ ವಿಧಿಸಬೇಕು. ಮದುವೆ ಹಾಗೂ ಇನ್ನಿತರೆ ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಸೂಚನೆ ನೀಡಬೇಕು. ಕೋವಿಡ್ ಸೋಂಕು ಹೆಚ್ಚಿರುವ ಕ್ಲಸ್ಟರ್‌ಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಟೆಸ್ಟಿಂಗ್, ಟ್ರೇಸಿಂಗ್ ಹಾಗೂ ವ್ಯಾಕ್ಸಿನೇಷನ್ ಕಾರ್ಯ ಸರಿಯಾಗಿ ಮಾಡಬೇಕು ಎಂದು ಹೇಳಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.