ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗದಲ್ಲಿ ಇಳಿದ ಕೊರೋನಾ ಅಬ್ಬರ: ಸತತ 2ನೇ ದಿನ ಸಾವಿನ ಸಂಖ್ಯೆ ಶೂನ್ಯ!

ಶಿವಮೊಗ್ಗದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ಸತತ 2ನೇ ದಿನವೂ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ ಶೂನ್ಯವಾಗಿದೆ. 

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ಸತತ 2ನೇ ದಿನವೂ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ ಶೂನ್ಯವಾಗಿದೆ. 

9 ವಾರಗಳ ಅಂತರದ ಬಳಿಕ ಜಿಲ್ಲೆಯಲ್ಲಿ ಜುಲೈ 26 ರಿಂದ ಯಾವುದೇ ಕೋವಿಡ್ -19 ಸಾವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋಂಕು ಕಾಣಿಸಿಕೊಂಡ 24 ಗಂಟೆಗಳೊಳಗಾಗಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದರಿಂದ ಸಾವಿನ ಸಂಖ್ಯೆ ಇಳಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಅವರು ಹೇಳಿದ್ದಾರೆ. 

ಸೋಂಕಿತ ವ್ಯಕ್ತಿಗೆ ಶೀಘ್ರಗತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 27ರವರೆಗೆ ಜಿಲ್ಲೆಯಲ್ಲಿ ಒಟ್ಟು 1,039 ಸಾವುಗಳು ಸಂಭವಿಸಿದ್ದು, ಶೇ.50ರಷ್ಟು ಸಾವುಗಳು ಚಿಕ್ಕಮಗಳೂರು, ದಾವಣಗೆರೆಯ ಚೆನ್ನಗಿರಿ ಹಾಗೂ ಕಾರವಾರದಲ್ಲಿ ಸಂಭವಿಸಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್