ರಾಜ್ಯ

ರಾಜ್ಯದಲ್ಲಿ ಕೊರೋನಾದಿಂದ 37 ಸಾವು: ಬೆಂಗಳೂರಿನಲ್ಲಿ 450 ಸೇರಿ 1,987 ಕೊರೋನಾ ಪ್ರಕರಣ ಪತ್ತೆ!

Vishwanath S

ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,987 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,05,124ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 37 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,562ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 450 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,27,339ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,632 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,44,742ಕ್ಕೆ ಏರಿಕೆಯಾಗಿದೆ. ಇನ್ನು 23,796 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,38,532 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,987 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.43ಕ್ಕೆ ಇಳಿದಿದೆ.

SCROLL FOR NEXT