ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಕಾಲೇಜಿನ ಗೇಟ್ ಬಿದ್ದು 10 ವರ್ಷದ ಬಾಲಕ ಸಾವು

ಕಾಲೇಜು ಕಾಂಪೌಂಡ್ ಗೋಡೆಗೆ ಅಳವಡಿಸಿದ್ದ ಮುಖ್ಯ ಗೇಟ್ ವೊಂದು ಆಕಸ್ಮಿಕವಾಗಿ ಬಿದ್ದ ಪರಿಣಾಮ 10 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಅಹಿತಕರ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್​ಡಿ ಕಾಲೇಜಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಬೆಳಗಾವಿ: ಕಾಲೇಜು ಕಾಂಪೌಂಡ್ ಗೋಡೆಗೆ ಅಳವಡಿಸಿದ್ದ ಮುಖ್ಯ ಗೇಟ್ ವೊಂದು ಆಕಸ್ಮಿಕವಾಗಿ ಬಿದ್ದ ಪರಿಣಾಮ 10 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಅಹಿತಕರ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್​ಡಿ ಕಾಲೇಜಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಮೃತ ಬಾಲಕನನ್ನು ಪಟ್ಟಣದ ಇಂದ್ರಾನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ(10) ಎಂದು ಗುರುತಿಸಲಾಗಿದೆ.

ಗೇಟ್ ಮುಂದೆ ಸುಫೀಯಾನ ರಾಜು ಮುಲ್ಲಾ ಆಟವಾಡುತ್ತಿರುವಾಗ ರಭಸವಾದ ಗಾಳಿಗೆ ಗೇಟ್ ಆತನ ಮೈಮೇಲೆ ಬಿದ್ದಿದೆ. ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳದಲ್ಲಿ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT