ಕೋಟ ಶ್ರೀನಿವಾಸ ಪೂಜಾರಿ 
ರಾಜ್ಯ

ನನ್ನ ಆಸ್ತಿ ಗಳಿಕೆಯ ಬಗ್ಗೆ ತನಿಖೆ ನಡೆಸಿ: ಲೋಕಾಯುಕ್ತಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ

ಬ್ಯಾಂಕ್‌ ಸಾಲದ ಜತೆಗೆ ಸ್ವಂತ ದುಡಿಮೆಯಿಂದ ಉಡುಪಿ ಜಿಲ್ಲೆಯ ಕೋಟ ಗ್ರಾ.ಪಂ. ವ್ಯಾಪ್ತಿಯ ಗಿಳಿಯಾರು ಗ್ರಾಮದಲ್ಲಿ 13 ಸೆಂಟ್ಸ್‌ ಜಾಗದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುತ್ತಿದ್ದೇನೆ.

ಉಡುಪಿ: ಬ್ಯಾಂಕ್‌ ಸಾಲದ ಜತೆಗೆ ಸ್ವಂತ ದುಡಿಮೆಯಿಂದ ಉಡುಪಿ ಜಿಲ್ಲೆಯ ಕೋಟ ಗ್ರಾ.ಪಂ. ವ್ಯಾಪ್ತಿಯ ಗಿಳಿಯಾರು ಗ್ರಾಮದಲ್ಲಿ 13 ಸೆಂಟ್ಸ್‌ ಜಾಗದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುತ್ತಿದ್ದೇನೆ. ಆದರೆ ಕೆಲವರು 6 ಕೋಟಿ ರೂ. ವೆಚ್ಚದಲ್ಲಿ ಮನೆ ಕಟ್ಟಿಸುತ್ತಿರುವುದಾಗಿ ಸುಳ್ಳು ಮಾಹಿತಿ ಹರಡಿಸುತ್ತಿದ್ದು, ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದ್ದಾರೆ.

3 ಬಾರಿ ವಿಧಾನ ಪರಿಷತ್‌ ಸದಸ್ಯ, 2 ಬಾರಿ ಸಂಪುಟ ದರ್ಜೆ ಸಚಿವ ಹಾಗೂ 1 ಬಾರಿ ಪ್ರತಿಪಕ್ಷದ ನಾಯಕನಾಗಿದ್ದು, ಪ್ರತಿ ವರ್ಷ ಆಸ್ತಿಯ ವಿವರಗಳನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತಾ ಬಂದಿದ್ದೇನೆ. ಆದರೂ, ಈಗ ನಿರ್ಮಿಸುತ್ತಿರುವ ಮನೆಯ ಬಗ್ಗೆ ವಿನಾಕಾರಣ ಅಪಪ್ರಚಾರ ಮಾಡುತ್ತಿರುವುದು ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಹೆಚ್ಚು ಶುಲ್ಕ ವಿಧಿಸುವಂತಿಲ್ಲ: ಕೋಟ ಶ್ರೀನಿವಾಸ ಪೂಜಾರಿ. ಸರಳ ಸಜ್ಜನಿಕೆಯಿಂದ ರಾಜ್ಯದ ಜನರ ಗಮನ ಸೆಳೆದಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಮೇಲೆ ಆದಾಯಕ್ಕಿಂತ ಹೆಚ್ಚು ಗಳಿಕೆಯ ಟೀಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗುತ್ತಿದೆ.

ಸ್ವಂತ ಆದಾಯದಿಂದ 13 ಸೆಂಟ್ಸ್‌ ಜಾಗ ಖರೀದಿಸಿ ಗ್ರಾ.ಪಂ.ನಿಂದ ಪರವಾನಗಿ ಪಡೆದು ಮನೆ ಕಟ್ಟಿಸುತ್ತಿದ್ದೇನೆ. 2 ವರ್ಷ ಹಿಂದೆ ಅಪೆಕ್ಸ್‌ ಬ್ಯಾಂಕ್‌ನಿಂದ 35 ಲಕ್ಷ ರೂ. ಸಾಲ ಪಡೆಯಲಾಗಿದ್ದು, ಮತ್ತೆ 40 ಲಕ್ಷ ರೂ. ಸಾಲಕ್ಕಾಗಿ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಮಹತ್ತರ ವಿದ್ಯಮಾನಗಳು ನಡೆಯುತ್ತಿರುವ ಸಂದರ್ಭ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ನನ್ನ ಮಗ ಎಂಬಿಎ ಮುಗಿಸಿ ಸ್ವಂತ ಉದ್ದಿಮೆ ನಡೆಸುತ್ತಿದ್ದು, ಇಬ್ಬರು ಪುತ್ರಿಯರ ವಿದ್ಯಾಭ್ಯಾಸ ಅಂತಿಮ ಹಂತದಲ್ಲಿದೆ. ನನ್ನ ಮಗನ ಸ್ವಂತ ದುಡಿಮೆ ಮತ್ತು ನನ್ನ ದುಡಿಮೆಯ ಹಣದಲ್ಲಿ 60 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣವಾಗುತ್ತಿದೆ. ಮನೆ ನಿರ್ಮಾಣಕ್ಕಾಗಿ ಎರಡು ವರ್ಷಗಳ ಹಿಂದೆ ಅಪೆಕ್ಸ್ ಬ್ಯಾಂಕಿನಲ್ಲಿ 35 ಲಕ್ಷ ಸಾಲ ಪಡೆದು ಸಂಬಳ ಮತ್ತು ಗೌರವ ಧನದ ಮೂಲಕ ಸಾಲ ಮರುಪಾವತಿ ಮಾಡಿದ್ದೇನೆ. ಮನೆ ಕಟ್ಟಲು ಹಣ ಕಡಿಮೆಯಾಗಿರುವುದರಿಂದ ಮತ್ತೆ ಬ್ರಹ್ಮಾವರದ ವಾರಂಬಳ್ಳಿ ಎಸ್‌ಬಿಐ ಬ್ಯಾಂಕ್ ಶಾಖೆಯಲ್ಲಿ 40
ಲಕ್ಷ ಸಾಲಕ್ಕಾಗಿ ದಾಖಲಾತಿಗಳನ್ನು ನೀಡಲಾಗಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT