ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನವಜಾತ ಶಿಶು ಕದ್ದು ರೂ.15 ಲಕ್ಷಕ್ಕೆ ಮಾರಾಟ, ವೈದ್ಯೆ ಬಂಧನ!

ಚಾಮರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಡೆದಿದ್ದ ನವಜಾತ ಶಿಶು ಅಪಹರಣ ಪ್ರಕರಣ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ವೈದ್ಯೆಯೊಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ. 

ಬೆಂಗಳೂರು: ಚಾಮರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಡೆದಿದ್ದ ನವಜಾತ ಶಿಶು ಅಪಹರಣ ಪ್ರಕರಣ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ವೈದ್ಯೆಯೊಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ. 

ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯ ಮನೋವೈದ್ಯೆ ಡಾ.ರಶ್ಮಿ (34) ಬಂಧಿತ ವೈದ್ಯೆಯಾಗಿದ್ದಾರೆ. ನವಜಾತ ಶಿಶು ಅಪಹರಿಸಿದ್ದ ವೈದ್ಯೆ, ಮಗುವನ್ನು ರೂ.15 ಲಕ್ಷಕ್ಕೆ ಕೊಪ್ಪಳದ ದಂಪತಿಗೆ ಮಾರಾಟ ಮಾಡಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. 

ಇದೀಗ ಆರೋಪಿ ವೈದ್ಯೆಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಮಾರಾಟ ಮಾಡಲಾಗಿದ್ದ ಮಗುವನ್ನು ರಕ್ಷಣೆ ಮಾಡಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆಯವರು ಹೇಳಿದ್ದಾರೆ. 

ಮಗುವನ್ನು ಖರೀದಿಸಿದ್ದ ಕೊಪ್ಪಳ ಮೂಲದ ದಂಪತಿಗೆ ಬುದ್ದಮಾಂದ್ಯ ಮಗುವಿತ್ತು. ಅದರ ಚಿಕಿತ್ಸೆಗೆ ಅವರು 2014ರಲ್ಲಿ ಹುಬ್ಬಳ್ಳಿಯ ಸುತ್ತೂರಿನಲ್ಲಿರುವ ಆಸ್ಪತ್ರೆಗೆ ತೆರಳಿದ್ದಾಗ, ಅಲ್ಲಿ ಅವರಿಗೆ ಡಾ.ರಶ್ಮಿ ಪರಿಚಯವಾಗಿತ್ತು. ಹೀಗೆ ಒಡನಾಟ ಬೆಳೆಗ ಬಳಿಕ ರಶ್ಮಿ, ದಂಪತಿಗೆ ನೀವು ಭಯಪಡುವ ಅಗತ್ಯವಿಲ್ಲ. ಮತ್ತೊಂದು ಮಗು ನೀವು ಪಡೆಯಬಹುದು. ವೀರ್ಯಾಣು ಮತ್ತು ಅಂಡಾಣು ತೆಗೆದುಕೊಂಡು ಬಾಡಿಗೆ ತಾಯಿ ಹೊಟ್ಟೆಯಲ್ಲಿ ನಿಮ್ಮದೇ ಮಗು ಬೆಳಸಬಹುದು. ಅದಕ್ಕಾಗಿ ರೂ.15 ಲಕ್ಷ ಖರ್ಚಾಗುತ್ತದೆ. ಮಗು ಜನಿಸಿದ ಬಳಿಕ ನಿಮಗೆ ತಂದುಕೊಡುತ್ತೇನೆಂದು ತಿಳಿಸಿದ್ದರು. 

ಈ ಮಾತು ನಂಬಿದ್ದ ದಂಪತಿಗಳು, ವೈದ್ಯಗೆ ಹಣ ಕೊಡಲು ಸಮ್ಮತಿಸಿದ್ದಾರೆ. ಬಳಿಕ ಬಾಡಿಗೆ ತಾಯಿ ಹೊಟ್ಟೆಯಲ್ಲಿ ಮಗು ಗರ್ಭ ಧರಿಸಿದೆ ಎಂದು ಆ ಪೋಷಕರಿಗೆ ವೈದ್ಯೆ ಸುಳ್ಳು ಹೇಳಿದ್ದಳು. ಹೀಗಿರುವಾಗ ಹುಬ್ಬಳ್ಳಿಯ ಆಸ್ಪತ್ರೆ ಕೆಲಸಕ್ಕೆ ರಾಜೀನಾಮೆ ನೀಡಿದ್ದ ರಶ್ಮಿ, ಬೆಂಗಳೂರಿನ ಖಾಸಗಿ ಆಸ್ಪತ್ರೆ ಸೇರಿದ್ದರು. 

ಆಗ ಅದೇ ಸಮಯದಲ್ಲಿಯೇ ಚಾಮರಾಜಪೇಟೆ ಬಿಬಿಎಂಪಿ ಆಸ್ಪತ್ರೆಯಲ್ಲಿ ಹುಸ್ನಾ ಬಾನು ಎಂಬುವವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಸ್ಪತ್ರೆಗೆ ವೈದ್ಯೆಯಂತೆ ಬಂದಿದ್ದ ರಶ್ಮಿ ಮಗುವನ್ನು ಅಪಹರಿಸಿಕೊಂಡು ಹೋಗಿ ದಂಪತಿಗೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ರೂ.15 ಲಕ್ಷ ಪಡೆದಿದ್ದರು ಎನ್ನಲಾಗಿದೆ. 

ಇತ್ತ ಮಗು ಕಳವಾದ ಹಿನ್ನೆಲೆಯಲ್ಲಿ ಮಗುವಿಗಾಗಿ ಕುಟುಂಬಸ್ಥರು ಆಸ್ಪತ್ರೆಯಲ್ಲಿ ತೀವ್ರವಾಗಿ ಹುಡುಕಾಡಿದ್ದಾರೆ. ಬಳಿಕ ಹತಾಶರಾಗಿ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾರೆ. 

ವರ್ಷವಾದರೂ ಮಗು ಪತ್ತೆಯಾಗದ ಹಿನ್ನೆಲೆಯಲ್ಲಿ ಬೇಸರಗೊಂಡು ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಶೀಘ್ರವೇ ಮಗು ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚಿಸಿತ್ತು.

ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸತತ ಪರಿಶೀಲನೆ ಹಾಗೂ ಒಂದು ಸಾವಿರಕ್ಕೂ ಹೆಚ್ಚು ದೂರುವಾಣಿ ಕರೆಗಳ ವಿವರ ಕಲೆಹಾಕಿ, ಅನುಮಾನ ಬಂದವರನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ಕಾರ್ಯಾಚರಣೆ ಅಂತಿಮವಾಗಿ ಫಲ ನೀಡಿ, ಅವರನ್ನು ವೈದ್ಯೆಯ ಬಳಿ ಕರೆದೊಯ್ದಿದೆ. 

ವಿಚಾರಣೆ ವೇಳೆ ವೈದ್ಯೆ ತಪ್ಪೊಪ್ಪಿಕೊಂಡಿದ್ದು, ಸಾಲ ಮರುಪಾವತಿ ಮಾಡುವ ಸಲುವಾಗಿ ಅಪರಾಧ ಎಸಗಿರುವುದಾಗಿ ವೈದ್ಯೆ ಹೇಳಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT