ರಾಜ್ಯ

ಕೋವಿಡ್-19: ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳು ಜೂನ್ 1ರಿಂದ ಲಸಿಕೆ ಪಡೆಯಬಹುದು- ಡಿಸಿಎಂ ಅಶ್ವತ್ಥ್ ನಾರಾಯಣ್

Manjula VN

ಬೆಂಗಳೂರು: ಅಧ್ಯಯನ ಹಾಗೂ ಉದ್ಯೋಗ ಹರಸಿ ವಿದೇಶಗಳಿಗೆ ತೆರಳಲಿರುವವರು ಜೂನ್ 1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ. ಸಿಎನ್. ಅಶ್ವತ್ಥ್ ನಾರಾಯಣ್ ಅವರು ಸೋಮವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗ ಮಾಡುವ ಮತ್ತು ವ್ಯಾಸಾಂಗ ಮಾಡುತ್ತಿರುವವರಿಗೆ ಆದ್ಯತಾ ಗುಂಪಿನ ಕೋಟಾದಲ್ಲಿ ಲಸಿಕೆ ನೀಡಲಾಗುವುದು. ಅವಶ್ಯಕತೆ ಇರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. 

ಅಲ್ಲದೆ, ಈ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಸರ್ಕಾರ ಅವರ ಬೇಡಿಕೆಗಳನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವಿಶೀಲ್ಡ್ ಲಸಿಕೆ ಕೊಡಲಾಗುವುದು. ಲಸಿಕೆ ಪಡೆಯಲು ಇಚ್ಛಿಸುವವರು ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮತ್ತು ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಹಾಜರುಪಡಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.

SCROLL FOR NEXT