ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಸಕ್ರಿಯ ಪ್ರಕರಣ ಇಳಿಕೆ, ಸಾವಿನ ಪ್ರಮಾಣ ಏರಿಕೆ

Manjula VN

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಮರಣ ಪ್ರಮಾಣ ಮಾತ್ರ ಏರುತ್ತಲೇ ಇದೆ. 

3 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣವನ್ನು ರಾಜ್ಯ ಹೊಂದಿದ್ದು, ಈ ಮೂಲಕ ದೇಶದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ತಮಿಳುನಾಡು ರಾಜ್ಯ ಮೊದಲ ಸ್ಥಾನದಲ್ಲಿದೆ. ಮೇ ತಿಂಗಳ ಮಧ್ಯಂತರದಲ್ಲಿ ಕರ್ನಾಟಕ ರಾಜ್ಯವು ಅತೀ ಹೆಚ್ಚು ಸಕ್ರಿಯ ಪ್ರಕರಣ ಹೊಂದಿದ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿತ್ತು. 

ಕೆಲವೇ ದಿನಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿದಿರುವುದು ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಸೂಚನೆಯನ್ನು ನೀಡುತ್ತಿದೆಯಾದರೂ ಮರಣ ಪ್ರಮಾಣ ಮಾತ್ರ ಇಳಿಕೆಯಾಗದಿರುವುದು ಆತಂಕವನ್ನು ಹೆಚ್ಚಾಗುವಂತೆ ಮಾಡುತ್ತಿದೆ. 

ರಾಜ್ಯದಲ್ಲಿ ಮಂಗಳವಾರ 14,304 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು ದಿನದ ಸೋಂಕು ಪ್ರಮಾಣ ದರ ಶೇ.12.30ಕ್ಕೆ ಇಳಿದಿದೆ. ಒಟ್ಟು ಸೋಂಕಿತರ ಸಂಖ್ಯೆ 26.18 ಲಕ್ಷಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ ಬರೋಬ್ಬರಿ 464 ಮಂದಿ ಸೋಂಕಿತರು ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 29,554ಕ್ಕೆ ಏರಿಕೆಯಾಗಿದೆ. ಇದರಂತೆ ಮರಣ ಪ್ರಮಾಣ ಸೇ.3.24ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 29,271 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 22.90 ಲಕ್ಷಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಸಕ್ರಿಯ ಪ್ರಕರಗಳ ಸಂಖ್ಯೆ 2.98 ಲಕ್ಷಕ್ಕೆ ಕುಸಿದಿದೆ. 

SCROLL FOR NEXT