ಸಚಿವ ಸುಧಾಕರ್ 
ರಾಜ್ಯ

ಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮ- ಸಚಿವ ಸುಧಾಕರ್

ಸಿ.ವಿ.ರಾಮನ್‌ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ. 

ಬೆಂಗಳೂರು: ಸಿ.ವಿ.ರಾಮನ್‌ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ. 

ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ಲಸಿಕಾ ಕಾರ್ಯಕ್ರಮವನ್ನು ರದ್ದುಗೊಳಿಸಿ, ಸಮೀಪದ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ರಘು ಅವರು  ಪಕ್ಷದ ಕಾರ್ಯಕರ್ತರು ಮತ್ತು ತಮ್ಮ ಸಂಬಂಧಿಕರಿಗೆ ಲಸಿಕೆ ನೀಡಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ. 

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಸಾರ್ಜಜನಿಕ ಪ್ರದೇಶಗಳಲ್ಲಿ, ಕಲ್ಯಾಣ ಮಂಟಪಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಲಾಗುತ್ತಿರುವ ಲಸಿಕೆಗಳನ್ನು ಆದ್ಯತೆಯ ಆಧಾರದ ಮೇಲೆ ಜನರಿಗೆ ನೀಡಬೇಕು. ಘಟನೆ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರೊಂದಿಗೆ ಮಾತುಕತೆ ನಡೆಸುತ್ತೇನೆ. ಒಂದು ವೇಳೆ ತಪ್ಪುಗಳಾಗಿರುವುದು ಕಂಡು ಬಂದಿದ್ದೇ ಆದರೆ, ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel