ರಾಜ್ಯ

ಜೂನ್ 15ರವರೆಗೆ ಲಾಕ್ ಡೌನ್ ವಿಸ್ತರಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ: ಸಚಿವ ಭೈರತಿ ಬಸವರಾಜ್ 

Sumana Upadhyaya

ಬೆಂಗಳೂರು: ಕೊರೋನಾ ಲಾಕ್ ಡೌನ್ ನ್ನು ಜೂನ್ 15ರವರೆಗೂ ವಿಸ್ತರಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮನವಿ ಮಾಡಿಕೊಳ್ಳುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಳೆ ಮುಖ್ಯಮಂತ್ರಿಗಳು ಬೆಂಗಳೂರು ನಗರದ ಸಚಿವರ ಸಭೆ ಕರೆದಿದ್ದಾರೆ. ಅಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಕೇಳಿಕೊಳ್ಳುತ್ತೇನೆ. 15ನೇ ತಾರೀಖಿನವರೆಗೆ ಸಂಪೂರ್ಣವಾಗಿ ಲಾಕ್ ಡೌನ್ ನ್ನು ಮುಂದುವರಿಸಿ ನಂತರ ಪರಿಸ್ಥಿತಿ ಅವಲೋಕನ ಮಾಡಿಕೊಂಡು ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳಲಿ ಎಂಬುದು ನನ್ನ ಅಭಿಪ್ರಾಯ ಎಂದರು.

ಕೊರೋನಾ ಸೋಂಕಿತರ ಮತ್ತು ಸಾವಿನ ಸಂಖ್ಯೆ ಇನ್ನೂ ಇಳಿಮುಖ ಆಗಬೇಕಾಗಿದೆ. ಇಡೀ ರಾಜ್ಯದಲ್ಲಿ 500ರೊಳಗೆ ಸೋಂಕಿತರ ಸಂಖ್ಯೆ ಇಳಿಮುಖವಾಗಬೇಕಾಗಿದೆ. ಅದಕ್ಕೆ ಲಾಕ್ ಡೌನ್ ಅನಿವಾರ್ಯ.ಕೊರೋನಾ ಮೂರನೇ ಅಲೆ ಏಳಬಹುದೆಂದು ತಜ್ಞರು ಹೇಳುತ್ತಿದ್ದಾರೆ. ಇದಕ್ಕೆ ನಾವು ತಯಾರಾಗಲು ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕಾಗಿರುವುದರಿಂದ ಈ ಲಾಕ್ ಡೌನ್ ವಿಸ್ತರಣೆ ಅನಿವಾರ್ಯವಾಗಿದೆ ಎಂದರು.

ಇಂದಿನ ಗಂಭೀರ ಆರೋಗ್ಯ ಪರಿಸ್ಥಿತಿಯನ್ನು ಅರಿತುಕೊಂಡು ಸಾರ್ವಜನಿಕರು ಸಾಧ್ಯವಾದಷ್ಟು ಮನೆಯಲ್ಲಿರಬೇಕು, ತೀರಾ ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಬರಬೇಕು, ಇಷ್ಟೊಂದು ಸಾವು-ನೋವುಗಳಾಗುತ್ತಿವೆ. ಹೀಗಾಗಿ ಜನರೇ ಅರ್ಥ ಮಾಡಿಕೊಂಡು ಮನೆಯಲ್ಲಿ ಸುರಕ್ಷಿತವಾಗಿರಬೇಕು ಎಂದರು.

SCROLL FOR NEXT