ಸಾಂದರ್ಭಿಕ ಚಿತ್ರ 
ರಾಜ್ಯ

ಅಗತ್ಯವಿರುವವರಿಗೆ ಆಹಾರ ಪೂರೈಸಲು ಸ್ವಂತ ವಾಹನ ಬಳಸುವಂತಿಲ್ಲ: ಬೆಂಗಳೂರು ಪೊಲೀಸರ ಎಚ್ಚರಿಕೆ

ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ತಮ್ಮ ವಾಹನಗಳನ್ನು ಹೊರಗೆ ತರಲು ಈ ನೆಪ ಬಳಸುತ್ತಿದ್ದಾರೆ, ಆದರೆ ಇದನ್ನು ಕ್ಷಮಿಸಲಾಗದು ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ, ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಆಹಾರ ಸಾಗಿಸುತ್ತಿದ್ದ ಹಲವು ಮಂದಿಯ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಬೊಮ್ಮನಹಳ್ಳಿ ಸಿಗ್ನಲ್ ಬಳಿ ಬಿಎಂಡಬ್ಲ್ಯು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ತಾನು ಅಗತ್ಯವಿರುವವರಿಗೆ ಆಹಾರವನ್ನು ವಿತರಿಸುತ್ತಿದ್ದೇನೆ ಎಂದು ಚಾಲಕ ಹೇಳಿಕೊಂಡಿದ್ದಾನೆ ಮತ್ತು ಕಾರಿನಲ್ಲಿ ಸುಮಾರು 10 ಆಹಾರ ಪ್ಯಾಕೆಟ್‌ಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸಲು ಬಯಸುವ ಯಾರಾದರೂ ಸರಕು ವಾಹನಗಳನ್ನು ಬಳಸುವ ಮೂಲಕ ಇದನ್ನು ಮಾಡಬಹುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅನೇಕ ಸಂಸ್ಥೆಗಳು ಈಗಾಗಲೇ ಈ ಸೇವೆಯನ್ನು ನೀಡುತ್ತಿವೆ. ಇದಕ್ಕಾಗಿ ಅವರು ವಿತರಣಾ ಕಂಪನಿಗಳನ್ನು ಸಹ ಬಳಸಬಹುದು. ಆದರೆ ಅವರು ಕಾರುಗಳಲ್ಲಿ ಅಥವಾ ಬೈಕ್‌ಗಳಲ್ಲಿ ವಿತರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭಾರೀ ಭೂಕಂಪಕ್ಕೆ ವೆನೆಜುವೆಲಾ ತತ್ತರ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ, ಮಾನವೀಯ ನೆರವಿಗೆ ಭಾರತ ಸಜ್ಜು..!

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!