ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ 
ರಾಜ್ಯ

ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ: ಅರವಿಂದ ಲಿಂಬಾವಳಿ; ಯಾವ ಭಾಷೆಯೂ ಕೆಟ್ಟದ್ದಲ್ಲ: ಹೆಚ್.ಡಿ. ಕುಮಾರಸ್ವಾಮಿ

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಬೆಂಗಳೂರು:  ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುವ ಲಿಂಬಾವಳಿ, ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಸರ್ಜ್ ಮಾಡಿದರೆ ಕನ್ನಡ ಎಂಬ ಉತ್ತರ ಬರುತಿತ್ತು.

ಇದನ್ನು ಖಂಡಿಸಿರುವ ಸಚಿವ ಅರವಿಂದ ಲಿಂಬಾವಳಿ, ಗೂಗಲ್ ಆಗಲಿ, ಬೇರೆ ಯಾರೇ ಆಗಲಿ ಕನ್ನಡ ಭಾಷೆ ಬಗ್ಗೆ ಗೌರವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ: ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಭಾಷೆ ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ. ಭಾರತದ ಶಾಸ್ತ್ರೀಯ ಭಾಷೆ ಎಂಬ ಹೆಗ್ಗಳಿಕೆ ಪಡೆದಿರುವ ಭಾಷೆ ಬಗ್ಗೆ ಕೀಳಾಗಿ ಮಾತನಾಡುವುದನ್ನು ಸಹಿಸಲಾಗುವುದು ಎಂದಿದ್ದಾರೆ. ಈ ಮಧ್ಯೆ ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ ಗೂಗಲ್ ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ?ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ.

ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT