ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಕೆ ಬಹುತೇಕ ಖಚಿತ: ಸುಳಿವು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದ್ದು, ಈ ಕುರಿತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಬುಧವಾರ ಸುಳಿವು ನೀಡಿದ್ದಾರೆ.

ಸಿಎಂ ಯಡಿಯೂರಪ್ಪ
Manjula VN
Updated On : 3 Jun 2021, 9:24 am

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದ್ದು, ಈ ಕುರಿತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಬುಧವಾರ ಸುಳಿವು ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರ್ನಾಟಕದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ಮುಂದುವರಿಸಲಾಗುವುದು ಲಾಕ್​ಡೌನ್​ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಎಂದು ಹೇಳಿದ್ದಾರೆ. 

ಲಾಕ್​ಡೌನ್​ನಲ್ಲಿ ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಸಭೆ ನಡೆಸಿ ತೀರ್ಮಾನ ಮಾಡಲಾಗುತ್ತದೆ. ನಾಳೆಯಿಂದ ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡಲಾಗುವುದು. ಕೆಲವೊಂದಕ್ಕೆ ಮಾತ್ರ ವಿನಾಯ್ತಿ ಕೊಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಲಾಕ್​ಡೌನ್ ಸಡಿಲ ಹೇಗೆ ಮಾಡಬೇಕು ಎಂಬ ಬಗ್ಗೆಯೂ ಚರ್ಚೆ ಮಾಡುತ್ತೇವೆ. 

Advertisement

Advertisement

ಜೂನ್ 7ರ ನಂತರವೂ ಲಾಕ್​ಡೌನ್ ವಿಸ್ತರಣೆಗೆ ನಿರ್ಧರಿಸಲಾಗಿದೆ. ವಿಸ್ತರಣೆ ಮಾಡಿ ಬಿಗಿ ಕ್ರಮ ಏನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement