ಸಿಪಿ ಯೋಗೇಶ್ವರ್ 
ರಾಜ್ಯ

ಮೆಗಾಸಿಟಿ ವಂಚನೆ ಪ್ರಕರಣ: ಸಚಿವ ಸಿ.ಪಿ. ಯೋಗೇಶ್ವರ ವಿರುದ್ಧ ದೂರು ದಾಖಲು

ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆಗಳ ನಡುವೆಯೇ ಮೆಗಾಸಿಟಿ ಡೆವಲಪರ್ಸ್‌ ಕಂಪನಿಯ ಗ್ರಾಹಕರಿಗೆ ವಂಚಿಸಿರುವ ಪ್ರಕರಣದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್‌ ವಿರುದ್ಧ ಕ್ರಮ ಸಿಐಡಿಗೆ ದೂರು ಸಲ್ಲಿಸಲಾಗಿದೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆಗಳ ನಡುವೆಯೇ ಮೆಗಾಸಿಟಿ ಡೆವಲಪರ್ಸ್‌ ಕಂಪನಿಯ ಗ್ರಾಹಕರಿಗೆ ವಂಚಿಸಿರುವ ಪ್ರಕರಣದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್‌ ವಿರುದ್ಧ ಕ್ರಮ ಸಿಐಡಿಗೆ ದೂರು ಸಲ್ಲಿಸಲಾಗಿದೆ.

ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಮೆಗಾಸಿಟಿ ನಿವೇಶನ ಸದಸ್ಯರ ಹಿತರಕ್ಷಣಾ ಸಂಘದ ಅಧ್ಯಕ್ಷ ರವೀಂದ್ರ ಬೆಲೆಯೂರು ಸಿಐಡಿ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

‘1995–2000ದ ಅವಧಿಯಲ್ಲಿ 9,000 ಜನರಿಂದ 70 ಕೋಟಿ ಸಂಗ್ರಹಿಸಿ ವಂಚಿಸಿರುವ ಆರೋಪ ಮೆಗಾಸಿಟಿ ಡೆವಲಪರ್ಸ್‌ ಮೇಲಿದೆ. 25 ವರ್ಷಗಳಾದರೂ ವಂಚನೆಗೊಳಗಾದ ಗ್ರಾಹಕರಿಗೆ ನ್ಯಾಯ ದೊರಕಿಲ್ಲ. ಕೇಂದ್ರ ಸರ್ಕಾರದ ಗಂಭೀರ ವಂಚನೆ ಪ್ರಕರಣಗಳ ತನಿಖಾ ಕಚೇರಿ (ಎಸ್‌ಎಫ್‌ಐಒ) ಮತ್ತು ರಾಜ್ಯದ ಸಿಐಡಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಆದರೂ, ಗ್ರಾಹಕರಿಗೆ ನ್ಯಾಯ ಲಭಿಸಿಲ್ಲ ಎಂದು ಮೇ 31ರಂದು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಗ್ರಾಹಕರ ವೇದಿಕೆಗಳ ಆದೇಶದಂತೆ 69 ಮಂದಿಗೆ ಪಾವತಿಸಬೇಕಿದ್ದ  4.86 ಕೋಟಿಯನ್ನು 2006ರಿಂದಲೂ ನೀಡಿಲ್ಲ. ಹೂಡಿಕೆದಾರರ ಹಿತಾಸಕ್ತಿ ರಕ್ಷಣಾ ಕಾಯ್ದೆಯ ಅಡಿಯಲ್ಲೂ ಕ್ರಮ ಜರುಗಿಸಿಲ್ಲ. ಕಂಪನಿಯ ಸಂಸ್ಥಾಪಕರಾದ ಸಚಿವ ಯೋಗೇಶ್ವರ್‌ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video