ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದ 5 ಜಿಲ್ಲೆಗಳಲ್ಲಿ ಉತ್ತಮ ಬೆಳವಣಿಗೆ; ಚೇತರಿಕೆ ಪ್ರಮಾಣ ಶೇ.92ಕ್ಕೂ ಹೆಚ್ಚು!

ರಾಜ್ಯದಲ್ಲಿ ಕೊರೋನಾಗಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಜೊತೆಗೆ ಗುಣಮುಖರಾಗುತ್ತಿರುವ ಪ್ರಮಾಣ ಕೂಡ ಏರಿಕೆಯಾಗುತ್ತಿದ್ದು, ರಾಜ್ಯದ ಚೇತರಿಕೆ ಪ್ರಮಾಣ ಶೇ.87.47ಕ್ಕೆ ಏರಿಕೆಯಾಗಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾಗಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಜೊತೆಗೆ ಗುಣಮುಖರಾಗುತ್ತಿರುವ ಪ್ರಮಾಣ ಕೂಡ ಏರಿಕೆಯಾಗುತ್ತಿದ್ದು, ರಾಜ್ಯದ ಚೇತರಿಕೆ ಪ್ರಮಾಣ ಶೇ.87.47ಕ್ಕೆ ಏರಿಕೆಯಾಗಿದೆ. 

ಇದೇ ವೇಳೆ ರಾಜ್ಯದ 5 ಜಿಲ್ಲೆಗಳಲ್ಲಿ ಉತ್ತಮ ಬೆಳವಣಿಗೆಗಳು ಕಂಡು ಬರುತ್ತಿದೆ. ಬೀದರ್, ಕಲುಬುರಗಿ, ವಿಜಯಪುರ, ಯಾದಗಿರಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಚೇತರಿಕೆ ಪ್ರಮಾಣ ಶೇ.92ಕ್ಕಿಂತಲೂ ಹೆಚ್ಚು ದಾಖಲಾಗಿದೆ. 

ಬೀದರ್ ಅತೀ ಹೆಚ್ಚು (ಶೇ.96.95) ಚೇತರಿಕೆ ಪ್ರಮಾಣವನ್ನು ಹೊಂದಿಗೆ. ಬಳಿಕ ಕಲಬುರಗಿ ಶೇ.95.75, ವಿಜಯಪುರ ಶೇ.92.91, ಯಾದಗಿರಿ ಮತ್ತು ಬಾಗಲಕೋಟೆ ಸೇ.93.29ರಷ್ಟು ಚೇತರಿಕೆ ಪ್ರಮಾಣವನ್ನು ಹೊಂದಿದೆ. ಮೇ. 8ರವರೆಗೆ ಬೀದರ್ ನಲ್ಲಿ ಚೇತರಿಕೆ ಪ್ರಮಾಣ ಶೇ.78.22, ಬಾಗಲಕೋಟೆಯಲ್ಲಿ ಶೇ.74.62, ವಿಜಯಪುರ ಶೇ.84.58, ಯಾದಿಗಿರಿ ಶೇ.72.51, ಕಲಬುರಗಿಯಲ್ಲಿ ಶೇ.72.35ರಷ್ಟಿತ್ತು. ಕೆಲವೇ ದಿನಗಳಲ್ಲಿ ಚೇತರಿಕೆ ಪ್ರಮಾಣ ಶೇ.92ಕ್ಕಿಂತಲೂ ಹೆಚ್ಚಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. 

ಈ ನಡುವೆ ಕೊಡಗು ಜಿಲ್ಲೆಯಲ್ಲಿ ಚೇತರಿಕೆ ಪ್ರಮಾಣ ಶೇ.90.09ರಷ್ಟು ದಾಖಲಾಗಿದ್ದರೆ, ಮಂಡ್ಯದಲ್ಲಿ ಶೇ.90.04ರಷ್ಟು ದಾಖಲಾಗಿದೆ. 

ಸೋಂಕು ಪ್ರಕರಣಗಳು ಹೆಚ್ಚಾದಂತೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲು ನಿರ್ಧರಿಸಿದ್ದೆವು. ಸಮೀಕ್ಷೆ ವೇಳೆ ಕೆಲವರಲ್ಲಿ ಲಕ್ಷಣಗಳಿರುವುದು ಪತ್ತೆಯಾಗಿತ್ತು. ಕೂಡಲೇ ಪರೀಕ್ಷೆಗಳನ್ನು ನಡೆಸಿ ಹೋಂ ಐಸೋಲೇಷನ್ ಕಿಟ್, ಔಷಧಿಗಳನ್ನು ವಿತರಿಸಲಾಗಿತ್ತು. ಕೊರೋನಾ ಪರೀಕ್ಷಾ ವರದಿ ಬರುವುದಕ್ಕೂ ಮುನ್ನವೇ ಚಿಕಿತ್ಸೆ ಆರಂಭಿಸುವಂತೆ ತಿಳಿಸಿದ್ದೆವು. ಇದರಿಂದಾಗಿ ಗುಣಮುಖ ಪ್ರಮಾಣ ಏರಿಕೆಯಾಗಲು ಕಾರಣವಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ್ ದೇಸಾಯಿಯವರು ಹೇಳಿದ್ದಾರೆ. 

ಇದಲ್ಲದೆ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ಔಷಧಿಗಳ ಕೊರತೆಯಾಗದಂತೆ ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ. ಸೂಕ್ತ ಸಮಯಕ್ಕೆ ಸೂಕ್ತ ಔಷಧಿಗಳನ್ನು ರೋಗಿಗಳಿಗೆ ನೀಡಲಾಗುತ್ತಿದ್ದು, ಇದರ ಪರಿಣಾಮ ಸೋಂಕಿತರು ಶೀಘ್ರಗತಿಯಲ್ಲಿ ಗುಣಮುಖರಾಗುತ್ತಿದ್ದಾರೆಂದು ತಿಳಿಸಿದ್ದಾರೆ. 

ಕಲಬುರಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರಮಾ ಬಸಪ್ಪ ಗಣಜಲಖೇಡ್ ಅವರು ಮಾತನಾಡಿ, ಕೊರೋನಾ ಮೊದಲ ಅಲೆಯಲ್ಲಿ ನಗರ ಪ್ರದೇಶಗಳಲ್ಲಿ ಮಾತ್ರ ಸೋಂಕು ಹೆಚ್ಚಾಗಿ ಪತ್ತೆಯಾಗಿತ್ತು. ಕೊರೋನಾ 2ನೇ ಅಲೆಯಲ್ಲಿ ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ. ಸೋಂಕಿತರನ್ನು ಪತ್ತೆ ಮಾಡಲು ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತರನ್ನು ನಿಯೋಜಿಸಿ, ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲಾಗಿತ್ತು. ಕೊರೋನಾ ಸೋಂಕಿತರ ಆರೋಗ್ಯದ ಮೇಲೆ ಕಣ್ಗಾವಲಿರಿಸಲು ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೆವು. ಗಂಭೀರ ಪರಿಸ್ಥಿತಿಯಲ್ಲಿದ್ದವರನ್ನು ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದೆವು. ಇದಲ್ಲದೆ ಹೋಂ ಐಸೋಲೇಷನ್ ನಲ್ಲಿರುವವರ ಆರೋಗ್ಯ ಪರಿಶೀಲಿಸಲು ತಂಡವನ್ನೂ ರಚನೆ ಮಾಡಲಾಗಿತ್ತು. ಅಲ್ಲದೆ, ವೈದ್ಯರನ್ನು ಕರೆಸಿ ಹೋಂ ಐಸೋಲೇಷನ್ ನಲ್ಲಿದ್ದವರ ಆರೋಗ್ಯ ಆಗಾಗೆ ತಪಾಸಣೆ ನಡೆಸಲಾಗುತ್ತಿತ್ತು. ಇವಷ್ಟೇ ಅಲ್ಲದೆ, ಲಾಕ್ಡೌನ್ ಕೂಡ ಸೋಂಕು ತಗ್ಗಲು ಕಾರಣವಾಗಿದೆ. ಹೆಚ್ಚು ಸೋಂಕಿರುವ ಗ್ರಾಮಗಳನ್ನು ಗುರ್ತಿಸಿ, ಪರೀಕ್ಷೆಗಳ ಸಂಖ್ಯೆ ಹೆಚ್ಚಿದ್ದೆವು. ಶೂನ್ಯ ಪ್ರಕರಣವಿರುವ ಗ್ರಾಮದಲ್ಲಿಯೂ ಪರೀಕ್ಷೆಗಳನ್ನು ನಡೆಸಿದ್ದೆವು ಎಂದು ಮಾಹಿತಿ ನೀಡಿದ್ದಾರೆ. 

ರಾಜ್ಯದಲ್ಲಿ 30 ಸಾವಿರ ಗಡಿ ದಾಟಿದ ಕೊರೋನಾ ಸಾವು
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 463 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 30 ಸಾವಿರ ಗಡಿ ದಾಟಿ 30.017ಕ್ಕೆ ತಲುಪಿದೆ. 

ಈ ನಡುವೆ ಬುಧವಾರ ರಾಜ್ಯದಲ್ಲಿ ಹೊಸ ಕೋವಿಡ್ ಸೋಂಕು ಪ್ರಕರಣಗಳು ತುಸು ಏರಿಕೆಯಾಗಿದ್ದು, ನಿನ್ನೆ ಒಂದೇ 16,387 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 26.35ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ 21.199 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.93 ಲಕ್ಷಕ್ಕೆ ಇಳಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT