ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು ಬೆಂಗಳೂರಿನ 3,221 ಸೇರಿ 16,068 ಪ್ರಕರಣ ಪತ್ತೆ, 364 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 16,068 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,69,514ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 16,068 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,69,514ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 364 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 30,895ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 3,221 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,77,496ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 206 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 22,316 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 23,58,412ಕ್ಕೆ ಏರಿಕೆಯಾಗಿದೆ. ಇನ್ನು 2,80,186 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,50,610 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 16,068 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 10.66ಕ್ಕೆ ಇಳಿದಿದೆ.

ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 3221, ಬೆಳಗಾವಿಯಲ್ಲಿ 792,ಬಳ್ಳಾರಿಯಲ್ಲಿ 423,ಚಿಕ್ಕಬಳ್ಳಾಪುರದಲ್ಲಿ 400,ಚಿತ್ರದುರ್ಗದಲ್ಲಿ 702, ದಕ್ಷಿಣ ಕನ್ನಡದಲ್ಲಿ 806, ದಾವಣಗೆರೆಯಲ್ಲಿ 620,ಹಾಸನದಲ್ಲಿ 924,ಮೈಸೂರಿನಲ್ಲಿ 1265, ಶಿವಮೊಗ್ಗದಲ್ಲಿ 636,ತುಮಕೂರಿನಲ್ಲಿ 857,ಉಡುಪಿಯಲ್ಲಿ 561, ಉತ್ತರ ಕನ್ನಡದಲ್ಲಿ 559 ಪ್ರಕರಣಗಳು ವರದಿಯಾಗಿವೆ.

ಕಳೆದ 24 ತಾಸಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಪೈಕಿ ಬೆಂಗಳೂರು ನಗರದಲ್ಲಿ 206,ಗ್ರಾಮಾಂತರದಲ್ಲಿ 9,ಬಳ್ಳಾರಿಯಲ್ಲಿ 8, ದಕ್ಷಿಣ ಕನ್ನಡದಲ್ಲಿ 9, ದಾವಣಗೆರೆಯಲ್ಲಿ 8, ಹಾಸನದಲ್ಲಿ 9,ಕೋಲಾರದಲ್ಲಿ 10 ಮೈಸೂರಿನಲ್ಲಿ 18 ಪ್ರಕರಣಗಳು ಸೇರಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!