ಸಚಿವ ಸುರೇಶ್ ಕುಮಾರ್ 
ರಾಜ್ಯ

ಎಸ್ಎಸ್ಎಲ್'ಸಿ, ದ್ವಿತೀಯ ಪಿಯುಸಿ ಪರೀಕ್ಷೆ: ರಾಜ್ಯ ಸರ್ಕಾರ ಇಂದು ನಿರ್ಧಾರ

ಕೇಂದ್ರ ಸರ್ಕಾರ ಸಿಬಿಎಸ್ಇ ಹಾಗೂ ಐಸಿಎಸ್ಐ ಪರೀಕ್ಷೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಎಸ್ಎಲ್'ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್ಇ ಹಾಗೂ ಐಸಿಎಸ್ಐ ಪರೀಕ್ಷೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಎಸ್ಎಲ್'ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

ಶಿಕ್ಷಣ ತಜ್ಞರು, ಅಧಿಕಾರಿಗಳು, ಪೋಷಕರು, ಶಿಕ್ಷಕರು ಹಾಗೂ ಖಾಸಗಿ ಶಾಲಾ ಸಂಘಟನೆಗಳು ಮಾತ್ರವಲ್ಲದೆ, ಮುಖ್ಯಮಂತ್ರಿಗಳು, ಶಾಸಕ, ಸಚಿವರು ಸೇರಿ ಪ್ರಮುಖ ಜನಪ್ರತಿನಿಧಿಗಳಿಂದಲೂ ಅಭಿಪ್ರಾಯ ಸಂಗ್ರಹಿಸಿರುವ ಸುರೇಶ್ ಕುಮಾರ್ ಅವರು ಇಂದು ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಇವು ಕೇವಲ ಅರ್ಹತಾ ಪರೀಕ್ಷೆಗಳಷ್ಟೇ. ಇದು ವಿದ್ಯಾರ್ಥಿಗಳಿಗೆ ಅಂಕಗಳು ಮತ್ತು ಶ್ರೇಣಿಗಳೊಂದಿಗೆ ಪ್ರಮಾಣಪತ್ರಗಳನ್ನು ನೀಡುತ್ತದೆ, ವಿದ್ಯಾರ್ಥಿಗಳ ಪರಿಶೀಲಿಸಲು ಕಾಲೇಜುಗಳಿಗೆ ಅದರದ್ದೇ ಆದ ಕಾರ್ಯವಿಧಾನಗಳನ್ನು ಹೊಂದಿದೆ ಎಂದು ಶಿಕ್ಷಣ ತಜ್ಞ ನೀರಜನರಾಧ್ಯ ವಿ.ಪಿ. ಅವರು ಹೇಳಿದ್ದಾರೆ. 

ಕೋವಿಡ್ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ಸಮರ್ಪಕವಾಗಿ ಪಠ್ಯ ಬೋಧನೆ ನಡೆದಿಲ್ಲ. ಅದರಲ್ಲೂ ಇಂಟರ್ನೆಟ್, ಆನ್'ಲೈನ್ ಶಿಕ್ಷಣ ಸೌಲಭ್ಯಗಳೂ ಇಲ್ಲದ ಸರ್ಕಾರಿ ಶಾಲಾ ಮಕ್ಕಳಿಗೆ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ನಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಎಸ್ಎಸ್ಎಲ್'ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಸಮಂಜಸವಲ್ಲ ಎಂದು ಹೇಳಿದ್ದಾರೆ. 

ತಜ್ಞರಷ್ಟೇ ಅಲ್ಲದೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ರದ್ದುಪಡಿಸುವಂತೆ ಶಿಫಾರಸು ಮಾಡಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಗುರುತಿಸುವ / ಮೌಲ್ಯಮಾಪನ ಮಾಡುವ ವಿಧಾನಗಳನ್ನು ಚರ್ಚಿಸಬೇಕು ಎಂದು ಹೇಳಿದೆ.  

ಈ ನಡುವೆ ಪರೀಕ್ಷೆ ರದ್ದುಪಡಿಸುವಂತೆ ರಾಜ್ಯದ ಹಲವೆಡೆ ಎಸ್ಎಸ್ಎಲ್'ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. 

ವಿದ್ಯಾರ್ಥಿಗಲ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಮಹಾರಾಷ್ಟ್ರ, ಗೋವಾ, ಹರಿಯಾಣ, ಮಧ್ಯಪ್ರದೇಶ, ಗುಜರಾತ್ ಹಾಗೂ ಇತರೆ ರಾಜ್ಯಗಳು ಪರೀಕ್ಷೆಗಳನ್ನು ರದ್ದುಪಡಿಸಿವೆ. ಆದರೆ, ರಾಜ್ಯ ಸರ್ಕಾರ ಮಾತ್ರ ಇನ್ನೂ ಮೌನ ತಾಳಿರುವುದು ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ ಎಂದು ಎಐಡಿಎಸ್ಒ ಸಂಘಟನೆ ವಿದ್ಯಾರ್ಥಿಗಳು ಹೇಳಿದ್ದಾರೆ. 

ಪದವಿಪೂರ್ವ ಉಪನ್ಯಾಸಕರ ಸಂಘಟನೆಯ ಅಧ್ಯಕ್ಷ ನಿಂಗೇಗೌಡ ಅವರು ಮಾತನಾಡಿ, ಬಿಜೆಪಿ ಆಡಳಿತಾರೂಢ ಎಲ್ಲಾ ರಾಜ್ಯಗಳು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿವೆ. ರಾಜ್ಯದಲ್ಲಿ ಪರೀಕ್ಷೆ ರದ್ದುಗೊಳ್ಳುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದು ಸಮಸ್ಯೆಯಾಗಲಿದೆ. ಮೌಲ್ಯಮಾಪನ ಪ್ರಕ್ರಿಯೆ ಕೂಡ ಕಷ್ಟಕರವಾಗಲಿದೆ. 2019-2020ರಲ್ಲಿ ಮೌಲ್ಯಮಾಪನಕ್ಕೆ 54 ದಿನಗಳ ಕಾಲಾವಕಾಶ ಬೇಕಾಯಿತು. ಕಳೆದ ವರ್ಷ ಬಳಕೆ ಮಾಡಿದ ಮಾನದಂಡಗಳನ್ನೇ ಈ ವರ್ಷ ಕೂಡ ಅನುಸರಿಸಬಹುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT