ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸ್ತೀವಿ, ಇಲ್ಲಾಂದ್ರೆ ಇಲ್ಲ: ಸಿಎಂ ಯಡಿಯೂರಪ್ಪ
ಎಸ್ ಎಸ್ ಎಲ್ ಸಿ ಪರೀಕ್ಷೆ ಕೊರೋನಾ ಸೋಂಕು ಕಡಿಮೆಯಾದರೆ ನಡೆಸುತ್ತೇವೆ, ಇಲ್ಲದಿದ್ದರೆ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿ: ಎಸ್ ಎಸ್ ಎಲ್ ಸಿ ಪರೀಕ್ಷೆ ಕೊರೋನಾ ಸೋಂಕು ಕಡಿಮೆಯಾದರೆ ನಡೆಸುತ್ತೇವೆ, ಇಲ್ಲದಿದ್ದರೆ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಜುಲೈ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, 20 ದಿನ ಮುಂಚಿತವಾಗಿ ಪರೀಕ್ಷೆ ದಿನಾಂಕ ಘೋಷಣೆ ಮಾಡಲಾಗುವುದು. ಕೊವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಆಗದಿದ್ದರೆ, ಅಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶವಿದೆ. ಹೊಸ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಇಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರಕಟಿಸಿದ್ದರು.
ಈ ಬಗ್ಗೆ ಮಾಧ್ಯಮದವರು ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಿದಾಗ, ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದು ಈಗಿನ ಸದ್ಯದ ನಿರ್ಧಾರ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಕೊರೋನಾ ಸೋಂಕು ಇಳಿಮುಖವಾದರೆ ಪರೀಕ್ಷೆ, ಇಲ್ಲದಿದ್ದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.