ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಶ್ವ ಪರಿಸರ ದಿನ ಆಚರಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 
ರಾಜ್ಯ

ಮೈಸೂರು ಅಧಿಕಾರಿಗಳ ಜಟಾಪಟಿ ಕುರಿತು ಇಂದು ನಿರ್ಧಾರ; ಜೂನ್ 14ರ ನಂತರ ಹಂತಹಂತದ ಅನ್ ಲಾಕ್: ಸುಳಿವು ಕೊಟ್ಟ ಸಿಎಂ 

ಜೂನ್ 14ರ ನಂತರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್ ಡೌನ್ ತೆರವು ಆಗುತ್ತದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೀಡಿದ್ದಾರೆ.

ಬೆಂಗಳೂರು: ಜೂನ್ 14ರ ನಂತರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್ ಡೌನ್ ತೆರವು ಆಗುತ್ತದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಕಡೆ ಲಾಕ್ ಡೌನ್ ನ್ನು ಸಡಿಲಿಕೆ ಮಾಡಿ ಅನ್ ಲಾಕ್ ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಬಗ್ಗೆ ಪ್ರತಿ ಜಿಲ್ಲೆಗಳ ಕೊರೋನಾ ಸ್ಥಿತಿಗತಿ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದಿದ್ದಾರೆ.

ಈಗಿನ ಲಾಕ್ ಡೌನ್ ಜೂನ್ 14ರ ಬೆಳಗ್ಗೆ 6 ಗಂಟೆಗೆ ಕೊನೆಯಾಗಲಿದ್ದು ಅದಕ್ಕೂ ನಾಲ್ಕೈದು ದಿನ ಮೊದಲು ಅನ್ ಲಾಕ್ ಮಾಡಬೇಕೆ, ಯಾವ ರೀತಿಯಲ್ಲಿ ಮಾಡಬೇಕು, ಎಲ್ಲಿ ಯಾವ ರೀತಿ ಸಡಿಲಿಕೆ ಮಾಡಬೇಕೆಂದು ನಿರ್ಧರಿಸಲಾಗುವುದು. ಕೊರೋನಾ ಪಾಸಿಟಿವಿಟಿ ರೇಟ್ ಶೇಕಡಾ 10ಕ್ಕಿಂತ ಕಡಿಮೆ ಶೇಕಡಾ 5ಕ್ಕೆ ಬರಬೇಕು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಪಾಸಿಟಿವಿಟಿ ರೇಟ್ ಶೇಕಡಾ 5ಕ್ಕಿಂತ ಕಡಿಮೆಯಾದ ಜಿಲ್ಲೆಗಳಲ್ಲಿ ಹಂತ ಹಂತಕ್ಕೆ ಅನ್ ಲಾಕ್ ಮಾಡುವ ಪ್ರಕ್ರಿಯೆಯನ್ನು ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದರು.

ಕೊರೋನಾ ಸಕ್ರಿಯ ಸೋಂಕಿತರ ಸಂಖ್ಯೆ 10 ಸಾವಿರಕ್ಕಿಂತ ಕಡಿಮೆ 5 ಸಾವಿರಕ್ಕೆ ಬಂದರೆ, ಶೇಕಡಾ 5ಕ್ಕೆ ಇಳಿಕೆಯಾದರೆ ಅನ್ ಲಾಕ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಒಲವು ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ಮೈಸೂರು ಅಧಿಕಾರಿಗಳ ಜಟಾಪಟಿ ಕುರಿತು ಇಂದು ಸಂಜೆಯೊಳಗೆ ನಿರ್ಧಾರ: ಇನ್ನು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಮೈಸೂರಿನ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಬಹಿರಂಗ ಜಟಾಪಟಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಿನ್ನೆ ಮೈಸೂರಿಗೆ ಹೋಗಿದ್ದ ಮುಖ್ಯ ಕಾರ್ಯದರ್ಶಿಗಳು ನನಗೆ ವರದಿ ನೀಡಿದ್ದಾರೆ, ಇಂದು ಸಂಜೆಯೊಳಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT