ಸಂಗ್ರಹ ಚಿತ್ರ 
ರಾಜ್ಯ

50ಕ್ಕೂ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕ ಅಳವಡಿಕೆ ಕಡ್ಡಾಯ: ಸರ್ಕಾರ

ರಾಜ್ಯದಲ್ಲಿನ 50ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ವೈದ್ಯಕೀಯ ಆಮ್ಲಜನಕದ ಘಟಕಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆರೊಗ್ಯ ಇಲಾಖೆ ಸೂಚಿಸಿದೆ. 

ಬೆಂಗಳೂರು: ರಾಜ್ಯದಲ್ಲಿನ 50ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ವೈದ್ಯಕೀಯ ಆಮ್ಲಜನಕದ ಘಟಕಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆರೊಗ್ಯ ಇಲಾಖೆ ಸೂಚಿಸಿದೆ. 

ಈ ಬಗ್ಗೆ ಇಲಾಖೆ ಆಯುಕ್ತ ಡಾ. ತ್ರಿಲೋಕ್ ಚಂದ್ರ ಅವರು ಸುತ್ತೋಲೆ ಹೊರಡಿಸಿದ್ದಾರೆ. ‘ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆಯಾದ ಬಳಿಕ  ವೈದ್ಯಕೀಯ ಆಮ್ಲಜನಕದ ಬೇಡಿಕೆ ಹೆಚ್ಚಳವಾಗಿದೆ. ಭವಿಷ್ಯದಲ್ಲಿ ಇದೇ ರೀತಿಯ ಪರಿಸ್ಥಿತಿ ಉಂಟಾದಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಹೊರಗಿನ ಮೂಲಗಳ ಅವಲಂಬನೆಯನ್ನು ಕಡಿಮೆ ಮಾಡಬೇಕು. ಹಾಗಾಗಿ, ಆಸ್ಪತ್ರೆಗಳು ಸಾಮಾನ್ಯ ದಿನಗಳಲ್ಲಿ ಅಗತ್ಯವಿರುವಷ್ಟು ಆಮ್ಲಜನಕವನ್ನಾದರೂ ಹೊಂದಿರುವ ಮರುಪೂರಣ ಘಟಕಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

‘100 ಹಾಸಿಗೆಗಳು ಹಾಗೂ ಅದಕ್ಕಿಂತ ಹೆಚ್ಚಿನ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳು ಸಾಮಾನ್ಯ ದಿನಗಳ ಬೇಡಿಕೆಯ ಎರಡು ಪಟ್ಟು ವೈದ್ಯಕೀಯ ಆಮ್ಲಜನಕ ಶೇಖರಣಾ ಸಾಮರ್ಥ್ಯದ ಘಟಕವನ್ನು ಹೊಂದಿರಬೇಕು. ನಾಲ್ಕು ತಿಂಗಳೊಳಗೆ ಇದು ಸಾಕಾರವಾಗಬೇಕು’ ಎಂದು ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಏಸ್ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಗದೀಶ್ ಹಿರೇಮಠ್ ಅವರು ಮಾತನಾಡಿ, ಹಿಂದೆ ಎಂದೂ ಈ ರೀತಿ ಆಮ್ಲಜನಕವನ್ನು ಬಳಸಲಾಗಿಲ್ಲ. ಕಳೆದ ವರ್ಷಗಳ ಪರಿಸ್ಥಿತಿಯನ್ನು ಗಮನಿಸಿದರೆ, ಆಸ್ಪತ್ರೆಗಳು ತಮ್ಮದೇ ಆದ ಆಕ್ಸಿಜನ್ ಘಟಕ ಹೊಂದಿರುವುದು ಉತ್ತಮವಾಗಿದೆ. ಮತ್ತೊಂದೆಡೆ 50ಕ್ಕೂ ಹೆಚ್ಚು ಹಾಸಿಗೆ ಹೊಂದಿರುವ ಆಸ್ಪತ್ರೆಗಳು ದ್ರವ ರೂಪದ ಆಮ್ಲಜನಕವನ್ನು ಹೊರಗಿನ ಮೂಲಗಳಿಂ ಪಡೆಯುವುದೂ ಉತ್ತಮವಾಗಿದೆ. ಆಕ್ಸಿಜನ್ ಘಟಕ ಸ್ಥಾಪನೆ ವೆಚ್ಚವನ್ನು ಹೆಚ್ಚು ಮಾಡಲಿದೆ. ಆಕ್ಸಿಜನ್ ಘಟಕ ಸ್ಥಾಪನೆಗೆ ರೂ.50 ಲಕ್ಷ ವೆಚ್ಚ ಮಾಡಬೇಕು. ಸರ್ಕಾರದ ಕೂಡ ಆಸ್ಪತ್ರೆಗಳಿಗೆ ನೆರವು ನೀಡಬೇಕು. ಆಕ್ಸಿಜನ್ ಘಟಕ ಸ್ಥಾಪನೆಗೆ ಸಾಲ ನೀಡಬೇಕು ಎಂದು ಹೇಳಿದ್ದಾರೆ. 

ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಇದಕ್ಕಾಗಿ ಸರ್ಕಾರ ಕೂಡ ಆಸ್ಪತ್ರೆಗಳಿಗೆ ಆರ್ಥಿಕ ನೆರವು ನೀಡಬೇಕು. ಆಕ್ಸಿಜನ್ ಘಟಕ ಸ್ಥಾಪನೆಗೆ ರೂ.70-80 ಲಕ್ಷ ವೆಚ್ಚವವಾಗುತ್ತದೆ. ಆಕ್ಸಿಜನ್ ಘಟಕಗಳು ಅತ್ಯಂತ ದುಬಾರಿಯಾದದ್ದು. ಬಿಬಿಎಂಪಿ ಸೋಂಕಿತರಿಗೆ ಹಾಸಿಗೆ ಮೀಸಲಿಡುವಂತೆ ಸೂಚಿಸಿತ್ತು. ಇದೀಗ ನಾವೂ ಕೂಡ ಆಕ್ಸಿಜನ್ ಘಟಕ ಸ್ಥಾಪನೆಗೆ ನೆರವು ನೀಡುವಂತೆ ಆಗ್ರಹಿಸುತ್ತೇವೆಂದು ರೀಗಲ್ ಆಸ್ಪತ್ರೆಯ ವೈದ್ಯ ಡಾ.ಸುರಿರಾಜು ಅವರು ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT