ಮೈಸೂರಿನಲ್ಲಿ ನಿನ್ನೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಮಾಲಾರ್ಪಣೆ 
ರಾಜ್ಯ

ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿಮಿ೯ಸಲು ಮನವಿ: ಸಿಎಂ ಯಡಿಯೂರಪ್ಪಗೆ ಸಚಿವ ಮುರುಗೇಶ್ ನಿರಾಣಿ ಪತ್ರ

ಕನಾ೯ಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ  ಕೆಲವು ಪ್ರಮುಖ ನಿಧಾ೯ರವನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಸರಕಾರಕ್ಕೆ ಮನವಿ ಮಾಡಿದ್ದಾರೆ.

ಬೆಂಗಳೂರು: ಕನಾ೯ಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ ಕೆಲವು ಪ್ರಮುಖ ನಿಧಾ೯ರವನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಸರಕಾರಕ್ಕೆ ಮನವಿ ಮಾಡಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ‌ಅವರ ಜನ್ಮದಿನದ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ನಿರಾಣಿ ಅವರು, ಮುಂದಿನ ಯುವ ಜನಾಂಗಕ್ಕೆ ಇದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ‌ಪದವಿ ಕಾಲೇಜುಗಳ ಪಠ್ಯ ಪುಸ್ತಕದಲ್ಲಿ ಅವರ ಚರಿತ್ರೆಯನ್ನು ಆಳವಡಿಸಲು ಕ್ರಮಕೈಗೊಳ್ಳಬೇಕು. ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯನ್ನು “ಎಂಜಿನಿಯರ್ ‌ ದಿನಾಚರಣೆ” ಮಾಡಿದಂತೆ ಇನ್ನು ಮುಂದೆ ಜೂನ್ 4 ರಂದು “ನಾಲ್ವಡಿ ಕೃಷ್ಣರಾಜ ಒಡೆಯರ್“ ಜನ್ಮ ‌ದಿನವನ್ನು ಸರಕಾರದ ವತಿಯಿಂದ ಆಚರಿಸಬೇಕು. ಅನೇಕ ಕೈಗಾರಿಕೆಗಳ ಸ್ಥಾಪನೆಗೆ ಕಾರಣೀಭೂತರಾದ ಅವರ ದಿನಾಚರಣೆಯನ್ನು 'ಕೈಗಾರಿಕಾ ದಿನಾಚರಣೆ' ಎಂತಲೂ ಆಚರಸಲು  ಸೂಕ್ತವಾದ ‌ನಿಧಾ೯ರವನ್ನು ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸ್ಥಳಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್  ಅವರ ಪ್ರತಿಮೆ ಸ್ಥಾಪನೆ ಮಾಡಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿರುವ ಅವರು, ರಾಜ್ಯದ ಪ್ರಮುಖ ಸ್ಥಳಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ‌ಅವರ ಪ್ರತಿಮೆಯನ್ನು ನಿಮಿ‌೯ಸಿರುವುದರಿಂದ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಅವರ ವ್ಯಕಿತ್ವವನ್ನು ಪರಿಚಯಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ 1905 ಆಗಸ್ಟ್ 3ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು. ಅವರ ಮತ್ತೊಂದು ಮಹತ್ತರ ಸಾಧನೆ ಎಂದರೆ, ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದ್ದು ಒಡೆಯರ್ ಅವರ ಮತ್ತೊಂದು ಮೈಲಿಗಲ್ಲು ಎಂದು ನಿರಾಣಿ ಅವರು ಬಣ್ಣಿಸಿದ್ದಾರೆ.

ದೇಶದಲ್ಲೇ ಮೊಟ್ಟಮೊದಲ ಬಾರಿಗೆ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 27೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು. ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ಈ ಎಲ್ಲಾ ಸಾಧನೆಯನ್ನು ಪರಿಗಣಿಸಿ ಸರಕಾರ ಸೂಕ್ತವಾದ ನಿಧಾ೯ರ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಬರೆದಿರುವ ಪತ್ರದಲ್ಲಿ ನಿರಾಣಿ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!

ಶಬರಿಮಲೆಯಲ್ಲಿ ಜನದಟ್ಟಣೆ: ಎರಡು ದಿನದಲ್ಲಿ 2 ಲಕ್ಷ ಅಯ್ಯಪ್ಪ ಭಕ್ತರ ಭೇಟಿ; ಮಹಿಳಾ ಭಕ್ತೆ ಸಾವು!

ಬಾಬಾ ಸಿದ್ದಿಕಿ ಕೊಲೆ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಿಂದ ಗಡೀಪಾರು!

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

SCROLL FOR NEXT