ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ಕರ್ನಾಟಕದಲ್ಲಿ 12,209 ಜನರಿಗೆ ಸೋಂಕು, 320 ಸಾವು, ಬೆಂಗಳೂರಿನಲ್ಲಿ ಮತ್ತಷ್ಟು ತಗ್ಗಿದ ಸೋಂಕು

ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಪ್ರಮಾಣ ಮತ್ತಷ್ಟು ತಗ್ಗಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 12,209 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು: ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಪ್ರಮಾಣ ಮತ್ತಷ್ಟು ತಗ್ಗಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 12,209 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ 12,209 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಕರ್ನಾಟಕದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 26,95,523 ಕ್ಕೆ ಏರಿಕೆಯಾಗಿದೆ. ಅಂತೆಯೇ ಇದೇ ಅವಧಿಯಲ್ಲಿ ಒಟ್ಟು 320 ಸೋಂಕಿತರು  ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 31580ಕ್ಕೆ ಏರಿಕೆಯಾಗಿದೆ.

ಇನ್ನು 24 ಗಂಟೆಗಳ ಅವಧಿಯಲ್ಲಿ 25,659 ಸೋಂಕಿತರು ಚೇತರಿಸಿಕೊಂಡಿದ್ದು ಆ ಮೂಲಕ ರಾಜ್ಯದಲ್ಲಿನ ಒಟ್ಟಾರೆ ಗುಣಮುಖರ ಸಂಖ್ಯೆ 24,09,417ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಪ್ರಸ್ತುತ ಒಟ್ಟು 2,54,505 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಶೇಕಡಾವಾರು ಪ್ರಮಾಣ 2.62 ರಷ್ಟು ಕಂಡು ಬಂದಿದ್ದು,  ಅಂತೆಯೇ ರಾಜ್ಯದ ಸೋಂಕು ಸಕಾರಾತ್ಮಕ ಪ್ರಮಾಣ ಶೇ.7.71ಕ್ಕೆ ಏಳಿಕೆಯಾಗಿದೆ.

ಬೆಂಗಳೂರಿನಲ್ಲಿ 2944 ಸೋಂಕು ಪ್ರಕರಣ ವರದಿ
ಇದೇ ವೇಳೆ ಎಂದಿನಂತೆ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 2944 ಸೋಂಕು ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಬೆಳಗಾವಿ (418), ದಕ್ಷಿಣ ಕನ್ನಡ (609), ಧಾರವಾಡ (262), ಹಾಸನ (655), ಮೈಸೂರಿನಲ್ಲಿ 1237 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!