ಕಾಂಗ್ರೆಸ್ ನಾಯಕರಿಂದ ಅರಸು ಪ್ರತಿಮೆಗೆ ಮಾಲಾರ್ಪಣೆ 
ರಾಜ್ಯ

ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ.ದೇವರಾಜ ಅರಸು ಪ್ರತಿಮೆ ಸ್ಥಾಪನೆಗೆ ಕಾಂಗ್ರೆಸ್ ಒತ್ತಾಯ

ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸ್ದಿದ್ದಾರೆ.

ಮೈಸೂರು: ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸ್ದಿದ್ದಾರೆ.

ಡಿ.ದೇವರಾಜ ಅರಸು  ರಸ್ತೆಯಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸು ಅವರ ಪ್ರತಿಮೆ ನಿರ್ಮಾಣ ಸಮಿತಿ ಏರ್ಪಡಿಸಿದ್ದ ಡಿ.ದೇವರಾಜ ಅರಸು ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು ಮಹಾರಾಣಿ ಕಾಲೇಜು ಸಮೀಪದ ಸಿಗ್ನಲ್‌ ಬಳಿ ಪ್ರತಿಮೆ ಸ್ಥಾಪಿಸಬೇಕಿದೆ. ಇದಕ್ಕಾಗಿ ಎಲ್ಲರೂ ಒಮ್ಮನಸ್ಸಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಪ್ರತಿಮೆ ಸ್ಥಾಪನೆಗೆ ಅನೇಕ ವರ್ಷಗಳಿಂದಲೂ ಬೇಡಿಕೆ ಇದೆ. ಆದರೆ, ಇನ್ನೂ ಇದು ಸಾಕಾರವಾಗಿಲ್ಲ. ಇನ್ನಾದರೂ, ಸರ್ಕಾರ ವಿಳಂಬ ಮಾಡದೇ ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸಿದರು. 

ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ಮಾತನಾಡಿ ಮಾತನಾಡಿ, ದೇವರಾಜ ಅರಸು ಅವರು ಹಿಂದುಳಿದ ವರ್ಗಗಳು, ದಲಿತರು, ಅಶಕ್ತರು ಮತ್ತು ತುಳಿತಕ್ಕೊಳಪಟ್ಟ  ಸಮಾಜಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿದರು. ಉಳುವವರಿಗೆ ಭೂಮಿ ಕಾನೂನು ಜಾರಿಗೆ ತಂದು ನೊಂದವರ ಪಾಲಿನ ದೇವರಾಗಿ ಉಳಿದರು’ ಎಂದು ಶ್ಲಾಘಿಸಿದರು, ಅವರ ಪ್ರತಿಮೆ ಸ್ಥಾಪಿಸಬೇಕು ಎಂಬ ಬಹು ದಿನದ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು’ ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT