ರಾಜ್ಯ

ಕೊರೋನ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಕೇಂದ್ರದ ಹೊಸ ಲಸಿಕೆ ನೀತಿ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ

Srinivasamurthy VN

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ತೀರ್ಮಾನದಿಂದ ದೇಶದಲ್ಲಿ ಲಸಿಕಾ ಅಭಿಯಾನ ಇನ್ನಷ್ಟು ಚುರುಕಗಾಗಲಿದೆ ಎಂದು ಕೇಂದ್ರದ ಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ.

ಕೇಂದ್ರ ಸರ್ಕಾರವು ದೇಶದಲ್ಲಿ ಉತ್ಪಾದನೆಯಾಗುವ ಶೇ. 75ರಷ್ಟು ಲಸಿಕೆಯನ್ನು ವಿತರಿಸುವುದರಿಂದ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಸೇವಾ ಶುಲ್ಕವನ್ನು 150 ರೂ.ಪಾಯಿಗೆ ನಿಗದಿ ಪಡಿಸಿರುವುದು ನಿಜಕ್ಕೂ ಸ್ವಾಗಾತಾರ್ಹ ಬೆಳವಣಿಗೆ ಎಂದು ಹೇಳಿದ್ದಾರೆ.

ಕೊರೋನ ವಿರುದ್ಧದ ಹೋರಾಟದಲ್ಲಿ ಇದೊಂದು ಮಹತ್ವಪೂರ್ಣ ಹೆಜ್ಜೆ ಎಂದರು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಣೆಯನ್ನು ನವೆಂಬರ್ ತಿಂಗಳವರೆಗೆ ವಿಸ್ತರಿಸಿರುವ ಕ್ರಮ ಸಂಕಷ್ಟಕ್ಕೆ ಸಿಲುಕಿದ ಬಡವರನ್ನು ಹಸಿವಿನ ದವಡೆಯಿಂದ ಪಾರು ಮಾಡಲಿದೆ ಎಂಬ  ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.

ಯುವಕರಿಗೆ ವೇಗವಾಗಿ ಲಸಿಕೆ; ಜಾಗತಿಕ ಟೆಂಡರ್ ಕರೆಯುವ ಅವಶ್ಯಕತೆಯೇ ಇಲ್ಲ
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಅವರು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ನೂತನ ಲಸಿಕಾ ನೀತಿ ಲಸಿಕೆ ಅಭಿಯಾನಕ್ಕೆ ಹೊಸ ವೇಗ ನೀಡಿದೆ. ಸ್ವತಃ ಪ್ರಧಾನಿಗಳೇ ಲಸಿಕೆ ಕೊರತೆ ಇರುವುದಿಲ್ಲ ಎಂದು ಭರವಸೆ  ನೀಡಿದ್ದು, ಆ ಮೂಲಕ ಕೇಂದ್ರ ಸರ್ಕಾರವೇ ಉಚಿತವಾಗಿ ರಾಜ್ಯಗಳಿಗೆ ಲಸಿಕೆ ನೀಡುವುದಾಗಿ ಹೇಳಿದ್ದಾರೆ. ಅದರಂತೆ ಲಸಿಕೆಗಾಗಿ ಜಾಗತಿಕ ಟೆಂಡರ್ ಕರೆಯುವ ಅವಶ್ಯಕತೆಯೇ ಇಲ್ಲ. ಮುಂದಿನ ದಿನಗಳಲ್ಲಿ ಯುವಕರಿಗೆ ವೇಗವಾಗಿ ಲಸಿಕೆ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

SCROLL FOR NEXT