ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ಗೆ 1,700 ಸರ್ಕಾರಿ ಸಿಬ್ಬಂದಿಗಳು ಬಲಿ, ರಕ್ತಸಂಬಂಧಿಗಳಿಗೆ 30 ಲಕ್ಷ ರೂ. ಪರಿಹಾರ

ಕಳೆದ ವರ್ಷ ಸಾಂಕ್ರಾಮಿಕ ರೋಗದ ಆರಂಭದಿಂದ ಕನಿಷ್ಠ 1,700 ರಾಜ್ಯ ಸರ್ಕಾರಿ ನೌಕರರು ಕೋವಿಡ್ -19 ಗೆ ಬಲಿಯಾಗಿದ್ದಾರೆ.ಈ ಪೈಕಿ, 1,21 ಉದ್ಯೋಗಿಗಳು ಏಪ್ರಿಲ್ 2021 ರಿಂದ ಎರಡನೇ ಅಲೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. 

ಬೆಂಗಳೂರು: ಕಳೆದ ವರ್ಷ ಸಾಂಕ್ರಾಮಿಕ ರೋಗದ ಆರಂಭದಿಂದ ಕನಿಷ್ಠ 1,700 ರಾಜ್ಯ ಸರ್ಕಾರಿ ನೌಕರರು ಕೋವಿಡ್-19 ಗೆ ಬಲಿಯಾಗಿದ್ದಾರೆ.ಈ ಪೈಕಿ, 1,21 ಉದ್ಯೋಗಿಗಳು ಏಪ್ರಿಲ್ 2021 ರಿಂದ ಎರಡನೇ ಅಲೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಅವರ ಪ್ರಕಾರ, ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳಿಗೆ ಸೇರಿದ ನೌಕರರು ಕೋವಿಡ್-19 ರಿಂದ ಹೆಚ್ಚು ಘಾಸಿಗೊಂಡಿದ್ದಾರೆ. ಸುಮಾರು 60 ರಷ್ಟು ಉದ್ಯೋಗಿಗಳಿಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡಲಾಗಿದೆ.

ರಾಜ್ಯದಲ್ಲಿ 72 ಇಲಾಖೆಗಳಿದ್ದು, ಸರ್ಕಾರವು 5.3 ಲಕ್ಷ ಜನರನ್ನು ನೇಮಿಸಿಕೊಂಡಿದ್ದರೆ, ಮಂಜೂರಾದ ಶಾಶ್ವತ ಹುದ್ದೆಗಳು 7.7 ಲಕ್ಷ. 1.5 ಲಕ್ಷ ಗುತ್ತಿಗೆ ನೌಕರರೂ ಇದ್ದಾರೆ ಎಂದು ಷಡಕ್ಷರಿ  ಟಿಎನ್‌ಐಇಗೆ ತಿಳಿಸಿದರು. ಕೋವಿಡ್ -19 ನಿಂದ ಸಾವನ್ನಪ್ಪಿದ ಸರ್ಕಾರಿ ನೌಕರರ ರಕ್ತಸಂಬಂಧಿಗಳಿಗೆ ಮತ್ತು ಅವಲಂಬಿತರಿಗೆ ಉದ್ಯೋಗ ನೀಡಲು ಸರ್ಕಾರ 30 ಲಕ್ಷ ರೂ. ಪರಿಹಾರ ನಿಗದಿ ಮಾಡಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಆದರೆ, ಕರ್ನಾಟಕ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಬಿ ಗುರುಸ್ವಾಮಿ, 30 ಲಕ್ಷ ರೂ. ಅಲ್ಪ ಮೊತ್ತವಾಗಿದ್ದು, ಪರಿಹಾರವಾಗಿ 1 ಕೋಟಿ ರೂ. ಅಗತ್ಯವೆಂದಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಕೋವಿಡ್ -19 ಕಾರಣದಿಂದಾಗಿ ವಿಧಾನ ಸೌಧ, ವಿಕಾಸ ಸೌಧ ಮತ್ತು ಎಂಎಸ್ ಬಿಲ್ಡಿಂಗ್ ಗಳಲ್ಲಿ  ಕೆಲಸ ಮಾಡುತ್ತಿದ್ದ ನೌಕರರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ತೆರಿಗೆಗಳ ಮೂಲಕ ಸಾಕಷ್ಟು ಹಣ ಸಿಗದ ಕಾರಣ ಹಣಕಾಸು ನಿರ್ವಹಣೆಗೆ ಸರ್ಕಾರ ಹೆಣಗಾಡುತ್ತಿದೆ ಎಂದು ಸಿಎಂಒ ಮೂಲಗಳು ತಿಳಿಸಿವೆ. "ನಾವು ಪರಿಹಾರವನ್ನು ವಿತರಿಸಲು ಪ್ರಯತ್ನಿಸುತ್ತಿದ್ದರೂ ವಿಳಂಬಗಳಿವೆ, ಅದನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು" ಎಂದು ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT