ಬೆಂಗಳೂರು ತಲುಪಿದ 29ನೇ ಆಕ್ಸಿಜನ್ ಎಕ್ಸ್ ಪ್ರೆಸ್: 126.7 ಮೆಟ್ರಿಕ್ ಟನ್ ಪ್ರಾಣವಾಯು ಆಗಮನ
29ನೇ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಂದು ಬೆಂಗಳೂರಿಗೆ ಆಗಮಿಸಿದೆ. 126.7 ಮೆಟ್ರಿಕ್ ಟನ್ ವೈದ್ಯಕೀಯ ಲಿಕ್ವಿಡ್ ಆಕ್ಸಿಜನ್ ಹೊತ್ತ ಈ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನ ವೈಟ್ ಫೀಲ್ಡ್ ಕಂಟೈನರ್ ಡಿಪೋ ತಲುಪಿರುವುದಾಗಿ ಪ್ರಸಾರ ಭಾರತಿ ಟ್ವೀಟ್ ಮಾಡಿದೆ.
ಬೆಂಗಳೂರು: 29ನೇ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಂದು ಬೆಂಗಳೂರಿಗೆ ಆಗಮಿಸಿದೆ. 126.7 ಮೆಟ್ರಿಕ್ ಟನ್ ವೈದ್ಯಕೀಯ ಲಿಕ್ವಿಡ್ ಆಕ್ಸಿಜನ್ ಹೊತ್ತ ಈ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನ ವೈಟ್ ಫೀಲ್ಡ್ ಕಂಟೈನರ್ ಡಿಪೋ ತಲುಪಿರುವುದಾಗಿ ಪ್ರಸಾರ ಭಾರತಿ ಟ್ವೀಟ್ ಮಾಡಿದೆ.
ಒಡಿಶಾದ ರೂರ್ಕೆಲಾದಿಂದ ನಿನ್ನೆ ಹೊರಟ ಈ ರೈಲು ಒಟ್ಟು 6 ಕ್ರಯೋಜೆನಿಕ್ (cryogenic) ಕಂಟೇನರ್ಗಳ ಮೂಲಕ 126 ಒಟ್ಟು 126.7 ಮೆಟ್ರಿಕ್ ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಹೊತ್ತು ತಂದಿದೆ.
ಇದುವರೆಗೆ ರಾಜಧಾನಿ ಬೆಂಗಳೂರಿಗೆ 29 ರೈಲುಗಳ ಮೂಲಕ 3,340.69 ಟನ್ ದ್ರವ ವೈದ್ಯಕೀಯ ಆಮ್ಲಜನಕ ತರಲಾಗಿದೆ. ಈ ಮೂಲಕ ಕೋವಿಡ್-19 ರೋಗಿಗಳಿಗೆ ಅತ್ಯವಶ್ಯಕವಾದ ಪ್ರಾಣವಾಯು ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.