ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 2,028 ಸೇರಿ 9,808 ಹೊಸ ಪ್ರಕರಣ ಪತ್ತೆ, 179 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 9,808 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,17,289ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 9,808 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,17,289ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 179 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 32,099ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 2,028 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,87,146ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 44 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 23,449 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 24,60,165ಕ್ಕೆ ಏರಿಕೆಯಾಗಿದೆ. ಇನ್ನು 2,25,004 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,30,224 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 9,808 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 7.53ಕ್ಕೆ ಇಳಿದಿದೆ.

ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 2,028, ಬೆಳಗಾವಿಯಲ್ಲಿ 443, ಬಳ್ಳಾರಿಯಲ್ಲಿ 212, ಚಿಕ್ಕಬಳ್ಳಾಪುರದಲ್ಲಿ 173, ಚಿಕ್ಕಮಗಳೂರು 287, ದಕ್ಷಿಣ ಕನ್ನಡದಲ್ಲಿ 525, ದಾವಣಗೆರೆಯಲ್ಲಿ 384, ಹಾಸನದಲ್ಲಿ 659, ಮೈಸೂರಿನಲ್ಲಿ 974, ಶಿವಮೊಗ್ಗದಲ್ಲಿ 703, ತುಮಕೂರಿನಲ್ಲಿ 589, ಉಡುಪಿಯಲ್ಲಿ 205, ಉತ್ತರ ಕನ್ನಡದಲ್ಲಿ 187 ಪ್ರಕರಣಗಳು ವರದಿಯಾಗಿವೆ.

ಕಳೆದ 24 ತಾಸಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಪೈಕಿ ಬೆಂಗಳೂರು ನಗರದಲ್ಲಿ 44, ಗ್ರಾಮಾಂತರದಲ್ಲಿ 8, ಶಿವಮೊಗ್ಗ 10, ಹಾವೇರಿ 3, ಧಾರವಾಡದಲ್ಲಿ 9, ಹಾಸನದಲ್ಲಿ 9, ಮೈಸೂರಿನಲ್ಲಿ 15 ಪ್ರಕರಣಗಳು ಸೇರಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ