ರಾಜ್ಯ

ರಾಜ್ಯದಲ್ಲಿಂದು ಕೊರೋನಾಗೆ 192 ಬಲಿ: ಬೆಂಗಳೂರಿನಲ್ಲಿ 2,395 ಸೇರಿ 10,959 ಹೊಸ ಪ್ರಕರಣ ಪತ್ತೆ!

Vishwanath S

ಬೆಂಗಳೂರು: ರಾಜ್ಯದಲ್ಲಿ ಇಂದು 10,959 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,28,248ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 192 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 32,291ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 2,395 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,89,541ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 50 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 20,246 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 24,80,411ಕ್ಕೆ ಏರಿಕೆಯಾಗಿದೆ. ಇನ್ನು 2,15,525 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,63,962 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 10,959 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 6.68ಕ್ಕೆ ಇಳಿದಿದೆ.

ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 2,395, ಬೆಳಗಾವಿಯಲ್ಲಿ 342, ಬಳ್ಳಾರಿಯಲ್ಲಿ 211, ಚಿಕ್ಕಬಳ್ಳಾಪುರದಲ್ಲಿ 268, ಚಿಕ್ಕಮಗಳೂರು 339, ದಕ್ಷಿಣ ಕನ್ನಡದಲ್ಲಿ 594, ದಾವಣಗೆರೆಯಲ್ಲಿ 227, ಹಾಸನದಲ್ಲಿ 745, ಮೈಸೂರಿನಲ್ಲಿ 1163, ಶಿವಮೊಗ್ಗದಲ್ಲಿ 562, ತುಮಕೂರಿನಲ್ಲಿ 662, ಉಡುಪಿಯಲ್ಲಿ 413, ಉತ್ತರ ಕನ್ನಡದಲ್ಲಿ 312 ಪ್ರಕರಣಗಳು ವರದಿಯಾಗಿವೆ.

ಕಳೆದ 24 ತಾಸಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಪೈಕಿ ಬೆಂಗಳೂರು ನಗರದಲ್ಲಿ 50, ಗ್ರಾಮಾಂತರದಲ್ಲಿ 8, ಶಿವಮೊಗ್ಗ 9, ಹಾವೇರಿ 12, ಧಾರವಾಡದಲ್ಲಿ 9, ಹಾಸನದಲ್ಲಿ 8, ಮೈಸೂರಿನಲ್ಲಿ 22 ಪ್ರಕರಣಗಳು ಸೇರಿವೆ.

SCROLL FOR NEXT