ರಾಜ್ಯ

ಬೆಂಗಳೂರಿನಲ್ಲಿ ಅಕ್ರಮ ಮದ್ಯ ಸಾಗಾಟ: ಇಬ್ಬರ ಬಂಧನ

Raghavendra Adiga

ಬೆಂಗಳೂರು: ತರಕಾರಿ ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರೂ ಆರೋಪಿಗಳನ್ನು ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.

ರಾಮಕೃಷ್ಣನ್ ಮತ್ತು ರಾಜಕುಮಾರ ಬಂಧಿತ ಆರೋಪಿಗಳು.

ಪೊಲೀಸರು ರಾತ್ರಿ ಗಸ್ತಿನಲ್ಲಿದ್ದಾಗ ತರಕಾರಿ ಚೀಲಗಳ ಕೆಳಗೆ ಬಚ್ಚಿಟ್ಟು ಸಾಗಿಸಲಾಗುತ್ತಿದ್ದ 509 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಡಾ. ಸಂಜೀವ್​ ಎಂ. ಪಾಟೀಲ್​ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕರ್ನಾಟಕದಿಂದ ತಮಿಳುನಾಡಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

ತಮಿಳುನಾಡಿನಲ್ಲಿ ಮದ್ಯ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದ್ದರಿಂದ ಆರೋಪಿಗಳು ಬೆಂಗಳೂರಿನಲ್ಲಿ ಮದ್ಯ ಖರೀದಿಸಿ ತಮಿಳುನಾಡಿಗೆ ಸಾಗಿಸುತ್ತಿದ್ದರು. 70 ರೂಪಾಯಿ ಬಾಟಲ್ ಅನ್ನು 500 ರಿಂದ 600 ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT