ರಾಜ್ಯ

ನಟ ಚೇತನ್ ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು: ಮಂಡಳಿ ಅಧ್ಯಕ್ಷರಿಂದ ನಗರ ಪೊಲೀಸ್ ಆಯುಕ್ತರಿಗೆ ದೂರು

Sumana Upadhyaya

ಬೆಂಗಳೂರು: ನಟ ಚೇತನ್ ನೀಡಿರುವ ಹೇಳಿಕೆ ಈಗ ಭಾರೀ ವಿವಾದ ಸೃಷ್ಟಿಸಿದೆ. ಬ್ರಾಹ್ಮಣ ಸಮುದಾಯ ವಿರುದ್ಧ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ, ಬ್ರಾಹ್ಮಣರನ್ನು ಭಯೋತ್ಪಾದಕರು ಎಂದು ಕರೆದಿದ್ದಾರೆ, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದ್ದೇನೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಅವರು, ನಟ ಚೇತನ್ ವಿರುದ್ಧ ದೂರು ನೀಡಲು ಇಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿ ಮಾಡಿದ್ದೆ, ಅವರು ಚೇತನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಚೇತನ್ ಕ್ಷಮೆ ಕೇಳಬೇಕು: ನಟ ಚೇತನ್ ನೀಡಿರುವ ಹೇಳಿಕೆಯನ್ನು ಖಂಡಿತಾ ಒಪ್ಪಲು ಸಾಧ್ಯವೇ ಇಲ್ಲ, ಷರತ್ತುರಹಿತವಾಗಿ ಅವರು ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು. ಅವರು ಹೀಗೆಲ್ಲಾ ಮಾತನಾಡುತ್ತಿರುವುದು ಕೇವಲ ಪ್ರಚಾರಕ್ಕೋಸ್ಕರ ಎಂದು ನನಗೆ ಅನಿಸುತ್ತಿದೆ. ಅವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದು ಸಚ್ಚಿದಾನಂದ ಮೂರ್ತಿ ದೂರಿನಲ್ಲಿ ನಮೂದಿಸಿದ್ದಾರೆ.

SCROLL FOR NEXT