ರಾಜ್ಯ

ವಿರೋಧದ ಬಳಿಕ ಬಿ.ಟೆಕ್ ಪರೀಕ್ಷೆ ರದ್ದುಪಡಿಸಿದ ಮಣಿಪಾಲ ಎಂಐಟಿ 

Manjula VN

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳು ತೀವ್ರ ವಿರೋಧ ಹಾಗೂ ಟೀಕೆಗಳನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಿ.ಟೆಕ್'ನ ಎರಡನೇ, ನಾಲ್ಕನೇ, ಆರನೇ, ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸಿದೆ ಎಂದು ತಿಳಿದುಬಂದಿದೆ. 

ಪರೀಕ್ಷೆಗಳನ್ನು ರದ್ದುಪಡಿಸಿರುವ ಮಣಿಪಾಲದ ಎಂಐಟಿ ಕಾಲೇಜು, ವಿದ್ಯಾರ್ಥಿಗಳ ಫಲಿತಾಂಶವನ್ನು ಹಿಂದಿನ ಸೆಮಿಸ್ಟರ್‌ನ ಕಾರ್ಯಕ್ಷಮತೆಯ ಆಧಾರದ ಮೇಲೆ ಮೌಲ್ಯಮಾಪನ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ವಿಶ್ವವಿದ್ಯಾನಿಲಯದ ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ, ಹಿಂದಿನ 2019-20ನೇ ಶೈಕ್ಷಣಿಕ ವರ್ಷದಲ್ಲಿ ಅನುಸರಿಸಿದ ಮಾರ್ಗ ಹಾಗೂ ವಿಧಾನವನ್ನೇ ಈ ಬಾರಿಯೂ ಅನುಸರಿಸಲಾಗುತ್ತದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಸಾಕಷ್ಟು ಮನವಿಗಳು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಎಂಐಟಿಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. 

SCROLL FOR NEXT