ವಾರಾಂತ್ಯಕ್ಕೆ ಸ್ವಕ್ಷೇತ್ರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ
ವಾರಾಂತ್ಯದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ ಮತ್ತು ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರು: ವಾರಾಂತ್ಯದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ ಮತ್ತು ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.
ಶುಕ್ರವಾರ ಹೆಚ್ಎಎಲ್'ಗೆ ತೆರಳಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ.
ಮೊದಲಿಗೆ ಹಾಸನಕ್ಕೆ ಭೇಟಿ ನೀಡುವ ಅವರು ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1.30ರ ಸುಮಾರಿಗೆ ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿ, ರಸ್ತೆ ಮೂಲಕ ಶಿವಮೊಗ್ಗ ಜಿಲ್ಲೆಗೆ ಶನಿವಾರ ಬೇಟಿ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಮುಂದಿನ ಬುಧವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೂ ಕೂಡ ರಾಜ್ಯಕ್ಕೆ ಭೇಟಿ ನೀಡಲಿದ್ದು, ಸರ್ಕಾರ ಮತ್ತು ಪಕ್ಷದಲ್ಲಿ ತಲೆದೋರಿರುವ ಗೊಂದಲ ನಿವಾರಣೆಗೆ ಕಸರತ್ತು ನಡೆಸುವ ನಿರೀಕ್ಷೆಯಿದೆ. ಈ ವೇಳೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿರುವುದು ಅತ್ಯಂತ ಮುಖ್ಯವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.