ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ 2191 ಸೇರಿ ರಾಜ್ಯದಲ್ಲಿಂದು 11042 ಹೊಸ ಪ್ರಕರಣ, 15721 ಚೇತರಿಕೆ, 194 ಸಾವು

Nagaraja AB

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆಯತ್ತಾ ಸಾಗಿದ್ದು, ಇಂದು ಹೊಸದಾಗಿ 11042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2739290ಕ್ಕೆ ಏರಿಕೆಯಾಗಿದೆ.

15721 ಸೋಂಕಿತರು ಇಂದು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2496132ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಇಂದು 194 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 32485 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 210652 ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ. 6.58 ರಷ್ಟಿದ್ದು, ಮರಣ ಪ್ರಮಾಣ ಶೇ. 1.75 ರಷ್ಟಿದೆ.

ಬೆಂಗಳೂರಿನಲ್ಲಿ 2191 ಪ್ರಕರಣಗಳು ದೃಢಪಟ್ಟಿದ್ದು, 47 ಸೋಂಕಿತರು ಸಾವನ್ನಪ್ಪಿದ್ದಾರೆ. 4846 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

SCROLL FOR NEXT