ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ.91.12ಕ್ಕೆ ಏರಿಕೆ

Manjula VN

ಬೆಂಗಳೂರು: ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜ್ಯದಲ್ಲಿ ಗುರುವಾರ ಚೇತರಿಕೆ ಪ್ರಮಾಣ ಶೇ.91.12ಕ್ಕೆ ತಲುಪಿದೆ.

ಕಳೆದ ವರ್ಷ ಎದುರಾಗಿದ್ದ ಕೊರೋನಾ ಮೊದಲನೇ ಅಲೆ ವೇಳೆ ಚೇತರಿಕೆ ಪ್ರಮಾಣ ಅಕ್ಟೋಬರ್ 30 ರಂದು ಶೇ.91ರ ಗಡಿ ದಾಟಿತ್ತು. 2ನೇ ಅಲೆ ವೇಳೆ ಅತ್ಯಂತ ಶೀಘ್ರಗತಿಯಲ್ಲಿ ಚೇತರಿಕೆ ಪ್ರಮಾಣ ಶೇ.91ರ ಗಡಿ ದಾಟಿರುವುದು ಉತ್ತಮ ಬೆಳವಣಿಗೆಯಾಗಿದೆ. 

ಗುರುವಾರ ಒಂದೇ ದಿನ ರಾಜ್ಯದಲ್ಲಿ 15,721 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನು ಬೆಂಗಳೂರಿನಲ್ಲಿಯೂ ಚೇತರಿಕೆ ಪ್ರಮಾಣ ಸುಧಾರಿಸುತ್ತಿದ್ದು, ನಗರದಲ್ಲಿ ಚೇತರಿಕೆ ಪ್ರಮಾಣ ಶೇ.90.71ರಷ್ಟಿದೆ. 

ಈ ನಡುವೆ ರಾಜ್ಯದಲ್ಲಿ ನಿನ್ನೆ 11,042 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,39,290ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುವುದರ ಜೊತೆಗೆ ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಕೂಡ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಪ್ರಸ್ತುತ ಪಾಸಿಟಿವಿಟಿ ಪ್ರಮಾಣ ಶೇ.8.78ರಷ್ಟಿದೆ. 

ನಿನ್ನೆ ಒಂದೇ ದಿನ ರಾಜ್ಯದಲ್ಲಿ 194 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 32,485ಕ್ಕೆ ಏರಿಕೆಯಾಗಿದೆ.  ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಮರಣ ಪ್ರಮಾಣ ಯಾವುದೇ ಬದಲಾವಣೆಯಾಗದೆ ಶೇ.1.18ರಷ್ಟೇ ಇದೆ. 

SCROLL FOR NEXT