ಸಂಗ್ರಹ ಚಿತ್ರ 
ರಾಜ್ಯ

ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರ ಮುಚ್ಚಬೇಡಿ: ಬಿಬಿಎಂಪಿಗೆ 'ಹೈ' ಸೂಚನೆ

ಕೊರೋನಾ 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಕೊರೋನಾ 3ನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ. 

ಬೆಂಗಳೂರು: ಕೊರೋನಾ 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಕೊರೋನಾ 3ನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ. 

ಕೊರೋನಾ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು. 

ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ನೀಡಿ, ಅದರ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳುವವರೆಗೆ ಯಾವುದೇ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಅಥವಾ ರದ್ದುಗೊಳಿಸಬಾರದು ಎಂದು ನ್ಯಾಯಾಲಯ ನಿರ್ದೇಶನ ನೀಡಿತು.

ಬಿಬಿಎಂಪಿ ವಕೀಲರು, ಯಾವುದೇ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಿಲ್ಲ್. ಮೂರನೇ ಅಲೆ ಎದುರಿಸಲು ಪಾಲಿಕೆ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಇನ್ನೂ ನಗರದ 1,311 ಕೊಳೆಗೇರಿಗಳಲ್ಲಿ ಈ ವರೆಗೆ ಸುಮಾರು 10,91,692 ಮಂದಿಗೆ ಲಸಿಕೆ ಹಾಕಲಾಗಿದೆ. ಲಸಿಕೆ ಅಭಿಯಾನ ಮುಂದುವರಿದಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್