ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಐಬಿಪಿಎಸ್ ನಡೆಗೆ ಹೆಚ್.ಡಿ. ಕುಮಾರಸ್ವಾಮಿ ಸ್ವಾಗತ

ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್  (ಆರ್ ಆರ್ ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ ನ ನಡೆಯನ್ನು ಮಾಜಿ ಸಿಎಂ ಹೆಚ್ ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.

ಬೆಂಗಳೂರು:  ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್  (ಆರ್ ಆರ್ ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ ನ ನಡೆಯನ್ನು ಮಾಜಿ ಸಿಎಂ ಹೆಚ್ ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.

ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿಯೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನು ಅಭಿನಂದಿಸಿರುವ ಹೆಚ್ ಡಿಕೆ, ಐಬಿಪಿಎಸ್ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್  ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014 ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ. 2014 ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್ ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ. ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ ಎಂದು ಹೇಳಿದ್ದಾರೆ.

2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್ ವಲಯದಲ್ಲಿ ಕನ್ನಡಿಗರೇ ಇರಬೇಕು. ಈ ಬಾರಿ ಐಬಿಪಿಎಸ್ ನಡೆಸುತ್ತಿರುವ ಬ್ಯಾಂಕಿಂಗ್  ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲ್ಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್ ಗಳಿವೆ. ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸುವುದು ಅಗತ್ಯವಿದೆ ಎಂದಿದ್ದಾರೆ.

ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ ಎಂದು ಹೆಚ್ ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT