ರಾಜ್ಯ

ಮೂಲಭೂತ ಸೌಕರ್ಯಗಳಿಲ್ಲದಿದ್ದರೆ ಅಂಗನವಾಡಿಗಳು ಕಾರ್ಯನಿರ್ವಹಿಸುವುದು ಹೇಗೆ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ 

Sumana Upadhyaya

ಬೆಂಗಳೂರು: ರಾಜ್ಯದಲ್ಲಿರುವ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ಹೈಕೋರ್ಟ್ ಮತ್ತೊಮ್ಮೆ ಸರ್ಕಾರಕ್ಕೆ ಛೀಮಾರಿ ಹಾಕಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಅವರನ್ನೊಳಗೊಂಡ ವಿಭಾಗೀಯ ಪೀಠ ಇಂದು ಪ್ರಕರಣವನ್ನು ಕೈಗೆತ್ತಿಕೊಂಡು ರಾಜ್ಯದಲ್ಲಿರುವ ಅಂಗನವಾಡಿಗಳಿಗೆ ತಕ್ಷಣವೇ ಫ್ಯಾನ್, ಶೌಚಾಲಯ, ವಿದ್ಯುಚ್ಛಕ್ತಿಯಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.

ಅಂಗನವಾಡಿಗಳಿಗೆ ಹಂತ ಹಂತಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂಬ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಫಿಡವಿಟ್ಟು ಅರ್ಥಹೀನ ಎಂದು ಕೂಡ ಹೈಕೋರ್ಟ್ ಹೇಳಿದೆ.

SCROLL FOR NEXT